February 22, 2019

100ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದ ಸ್ಟಾರ್ ಡೈರೆಕ್ಟರ್ ನಿಧನ

ಹೈದರಾಬಾದ್: ತೆಲುಗಿನ ಅರುಂಧತಿ ಚಿತ್ರದ ಪ್ರಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ(64) ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದಾಗಿ ನಿನ್ನೆ ಮುಂಜಾನೆ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ಅರುಂಧತಿ, ನಾಗರಹಾವು(2016), ಅಂಜಿ, ಅವತಾರಂ ರೀತಿಯ ಅದ್ಭುತ ಸಿನಿಮಾಗಳನ್ನ ಕೋಡಿ ರಾಮಕೃಷ್ಣ ಅವರು ನಿರ್ದೇಶಿಸಿದ್ದರು. ಸುಮಾರು 100ಕ್ಕೂ ಅಧಿಕ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತಿ ಗಳಿಸಿರುವ ಕೋಡಿ ರಾಮಕೃಷ್ಣ ಅವರು ಕನ್ನಡದಲ್ಲಿ 2016ರಲ್ಲಿ ತೆರೆಕಂಡ ಡಾ.ವಿಷ್ಣುವರ್ಧನ್ […]

100ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದ ಸ್ಟಾರ್ ಡೈರೆಕ್ಟರ್ ನಿಧನ Read More »

ಕ್ಯಾನ್ಸರ್ ನಿಂದ ಬಳಲುತ್ತಿರುವ ಮಗನ ಚಿಕಿತ್ಸೆಗೆ ಅಂಗಲಾಚುತ್ತಿದ್ದಾಳೆ ತಾಯಿ: ಸಹಾಯಕ್ಕಾಗಿ ಮೊರೆ

ಮೈಸೂರು: ಕ್ಯಾನ್ಸರ್ ನಿಂದ ಬಳಲುತ್ತಿರುವ ಮಗನನ್ನು ಬದುಕಿಸಿಕೊಡಿ ಅಂತಾ ತಾಯಿಯೊಬ್ಬರು ಸಹಾಯಹಸ್ತ ಬೇಡಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ನಿವಾಸಿಯ ಸೋಮಶೇಖರ್ ಹಾಗೂ ಸವಿತ ದಂಪತಿಯ ಪುತ್ರ 8 ವರ್ಷದ ಸುಜನ್ ಬ್ಲೆಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾನೆ.ಕಳೆದ 6 ವರ್ಷಗಳಿಂದ ಸುಜನ್ ಎಂಬ ಪುಟ್ಟ ಹುಡುಗ ಬ್ಲೆಡ್ ಕ್ಯಾನ್ಸರ್ ಗೆ ತುತ್ತಾಗಿದ್ದಾನೆ. 1 ವರ್ಷದ ಮಗುವಾಗಿದ್ದಾಗ ಈ ಮಾರಕ ಕಾಯಿಲೆಯಿಂದ ನರಳುತ್ತಿದ್ದಾನೆ. ಸುಜನ್ ಸರ್ಕಾರಿ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಸೋಮಶೇಖರ್ ಕಾರು ಚಾಲಕ,

ಕ್ಯಾನ್ಸರ್ ನಿಂದ ಬಳಲುತ್ತಿರುವ ಮಗನ ಚಿಕಿತ್ಸೆಗೆ ಅಂಗಲಾಚುತ್ತಿದ್ದಾಳೆ ತಾಯಿ: ಸಹಾಯಕ್ಕಾಗಿ ಮೊರೆ Read More »

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಬೆದರಿಕೆ ಕರೆ: ಪೊಲೀಸರಿಂದ ಹೈ ಅಲರ್ಟ್​

ಮೈಸೂರು: ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಚಾಮರಾಜನಗರ, ಮೈಸೂರಿನಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಕೇಂದ್ರ ರೈಲ್ವೆ ಕಂಟ್ರೋಲ್ ರೂಂಗೆ ತಡರಾತ್ರಿ ಸುಮಾರು 1.30ಕ್ಕೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಒಡ್ಡಿದ್ದಾನೆ. ಹೀಗಾಗಿ ತಪಾಸಣೆ ನಡೆಸಿರುವ ಪೊಲೀಸರು ಕರೆ ಮಾಡಿದ ನಂಬರ್​ ಸಂಗ್ರಹಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಗೆ ಹೆಚ್ಚುವರಿ ಪೊಲೀಸ್​ ಮಹಾ ನಿರ್ದೇಶಕರಿಗೆ (ಎಡಿಜಿಪಿ) ಕರೆ

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಬೆದರಿಕೆ ಕರೆ: ಪೊಲೀಸರಿಂದ ಹೈ ಅಲರ್ಟ್​ Read More »

Scroll to Top