April 2019

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ರೋಹನ್ ವಿ.ಗಂಗಾಡ್ಕರ್ ಮೈಸೂರಿಗೆ ಟಾಪರ್

ಮೈಸೂರು: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಿದೆ. ಪ್ರೌಢಶಿಕ್ಷಣ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್‌ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶವನ್ನು ಬಿಡುಗಡೆ ಮಾಡಿದರು. 2019ನೇ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಮೈಸೂರಿಗೆ ಶೇ.80.32 ರಷ್ಟು ಫಲಿತಾಂಶ ಲಭ್ಯವಾಗಿದೆ. ಈ ಬಾರಿ ಮೈಸೂರಿಗೆ ಫಲಿತಾಂಶದಲ್ಲಿ 17ನೇ ಸ್ಥಾನ ಲಭಿಸಿದೆ. ಐಡಿಯಲ್ ಜಾವಾ ರೋಟರಿ ಶಾಲೆಯ ವಿದ್ಯಾರ್ಥಿ ರೋಹನ್ ವಿ.ಗಂಗಾಡ್ಕರ್ 622 ಅಂಕಗಳಿಸಿ ಮೈಸೂರು ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಸಂಸ್ಕೃತದಲ್ಲಿ 125, ಇಂಗ್ಲಿಷ್ ನಲ್ಲಿ […]

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ರೋಹನ್ ವಿ.ಗಂಗಾಡ್ಕರ್ ಮೈಸೂರಿಗೆ ಟಾಪರ್ Read More »

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: 160 ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

ಕೊಲಂಬೋ: ಶ್ರೀಲಂಕಾದದಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದ್ದು, ದಾಳಿಯಲ್ಲಿ 160 ಮಂದಿ ಮೃತಪಟಿದ್ದಾರೆ. ಈಸ್ಟರ್ ಭಾನುವಾರದ ದಿನವಾದ ಇಂದು ಮೂರು ಚರ್ಚುಗಳು ಮತ್ತು ಮೂರು ಹೋಟೆಲ್ ಗಳಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ 160ಕ್ಕೂ ಹೆಚ್ಚಿನ ಜನರು ಸತ್ತು 300 ಮಂದಿ ಗಾಯಗೊಂಡಿದ್ದಾರೆ. ಕೊಲೊಂಬೊದಲ್ಲಿನ ಸೇಂಟ್ ಅಂತೋನಿ ಚರ್ಚ್, ಪಶ್ಚಿಮ ಕರಾವಳಿ ಪಟ್ಟಣವಾದ ನೆಗೋಂಬೊದಲ್ಲಿರುವ ಸೇಂಟ್ ಸೆಬಾಸ್ಟಿಯನ್ಸ್ ಚರ್ಚ್ ಮತ್ತು ಪೂರ್ವದ ಬ್ಯಾಟಿಕೊಲೊದಲ್ಲಿರುವ ಮತ್ತೊಂದು ಚರ್ಚ್ನಲ್ಲಿ ಸ್ಪೋಟ ಸಂಬವಿಸಿದೆ. ಅಲ್ಲದೆ ಪಂಚತಾರಾ ಹೋಟೆಲುಗಳಾದ ಶಾಂಗ್ರಿಲಾ, ಸಿನ್ನಮೋನ್ ಗ್ರಾಂಡ್ ಮತ್ತು

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: 160 ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ Read More »

ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣ: ಬೀದಿಗಿಳಿದು ವಿದ್ಯಾರ್ಥಿಗಳಿಂದ ಪ್ರತಿಭಟನೆ:- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕಪ್ರಭು ದೇವಸ್ಥಾನದ ಹಿಂಭಾಗದ ಬೆಟ್ಟದ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಶವವಾಗಿ ಪತ್ತೆಯಾಗಿದ್ದಳು. ಅಂದು ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಎಂದು ದಾಖಲಾಗಿದ್ದ ಪ್ರಕರಣ ಈಗ ಟ್ವಿಸ್ಟ್ ಪಡೆದಿದ್ದು ಅತ್ಯಾಚಾರವೆಸಗಿ, ಕೊಲೆ ಎಂದು ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿನಿ ಮಧು ತಾಯಿ ರೇಣುಕಾದೇವಿ ನೀಡಿದ ದೂರಿನ ಮೇರೆಗೆ ಪೊಲೀಸರು

ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣ: ಬೀದಿಗಿಳಿದು ವಿದ್ಯಾರ್ಥಿಗಳಿಂದ ಪ್ರತಿಭಟನೆ:- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ Read More »

ಭಾರತದಲ್ಲಿ ಟಿಕ್‍ಟಾಕ್ ಬ್ಯಾನ್: ಆ್ಯಪಲ್, ಗೂಗಲ್‌ನಿಂದ ಆ್ಯಪ್ ಡಿಲೀಟ್..!

ನವದೆಹಲಿ: ಆ್ಯಪಲ್ ಮತ್ತು ಗೂಗಲ್ ತನ್ನ ಆ್ಯಪ್ ಸ್ಟೋರ್ ನಿಂದ ಟಿಕ್‌ಟಾಕ್ ಆ್ಯಪ್‌ ತೆಗೆದು ಹಾಕಿದೆ. ಚೀನಾ ಮೂಲದ ಟಿಕ್ ಟಾಕ್ ಅನ್ನು ಆಪ್‍ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿ ಎಂದು ಗೂಗಲ್ ಮತ್ತು ಆಪಲ್ ಕಂಪನಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸೂಚನೆ ನೀಡಿತ್ತು. ಈ ಅಪ್ಲಿಕೇಶನ್ ನಲ್ಲಿ ಜನ ಆಕ್ಷೇಪಾರ್ಹ ವಿಡಿಯೋಗಳನ್ನು ಹಂಚಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಹೀಗಾಗಿ ಈ ಆ್ಯಪನ್ನು ನಿಷೇಧಿಸಬೇಕೆಂದು ಅರ್ಜಿದಾರರು ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿ ಮನವಿ

ಭಾರತದಲ್ಲಿ ಟಿಕ್‍ಟಾಕ್ ಬ್ಯಾನ್: ಆ್ಯಪಲ್, ಗೂಗಲ್‌ನಿಂದ ಆ್ಯಪ್ ಡಿಲೀಟ್..! Read More »

ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗನಿಗೆ ಸ್ಥಾನ

ಮುಂಬೈ: ಇಂಗ್ಲೆಂಡ್​ನಲ್ಲಿ ನಡೆಯಲಿರುವ 2019ರ ಐಸಿಸಿ ಏಕದಿನ ವಿಶ್ವಕಪ್​ಗೆ 15 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿರಾಟ್​ ಕೊಹ್ಲಿ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. 15 ಸದಸ್ಯರ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದ್ದು, ಬಿಸಿಸಿಐ ಪ್ರಕಟಿಸಿರುವ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದು, ಕನ್ನಡಿಗರಿಗೆ ಖುಷಿ ತಂದಿದೆ. ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ

ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗನಿಗೆ ಸ್ಥಾನ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಇಂದು ಫಲಿತಾಂಶವನ್ನು ಪ್ರಕಟಿಸಿದರು. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಫಲಿತಾಂಶದಲ್ಲಿ ಉಡುಪಿ – ದಕ್ಷಿಣ ಕನ್ನಡ ಮೇಲುಗೈ ಸಾಧಿಸಿವೆ. ರಾಜ್ಯದಲ್ಲೇ ಉಡುಪಿ ಪ್ರಥಮ ಸ್ಥಾನ ದಕ್ಷಿಣ ಕನ್ನಡ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ Read More »

ಛಾಯಾಚಿತ್ರ ಪ್ರದರ್ಶನದ ಮೂಲಕ ಮತದಾನ ಜಾಗೃತಿ ಅಭಿಯಾನ

ಮೈಸೂರು: ದಿನನಿತ್ಯ ಸಾವಿರಾರು ಜನರು ಬಸ್ ನಲ್ಲಿ ವಿವಿಧ ಪ್ರದೇಶ ತೆರಳಲು ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಚುನಾವಣೆಯಲ್ಲಿ ಮತದಾನ ಮಾಡುವಂತ ಸಂದೇಶ ಸಾರುವ ಛಾಯಾಚಿತ್ರ ಪ್ರದರ್ಶನ ನಾಗರೀಕರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಅರಿವು ಮೂಡಿಸುತ್ತಿದೆ ಎಂದು ಜಿಲ್ಲಾ ಸ್ವೀಪ್ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಕೆ.ಜ್ಯೋತಿ ಅವರು ತಿಳಿಸಿದರು. 2019 ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಬಗ್ಗೆ ಮತದಾರರಿಗೆ ಅರಿವು ಮೂಡಿಸಲು ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ಕರ್ನಾಟಕ ಹಾಗೂ ವಾರ್ತಾ

ಛಾಯಾಚಿತ್ರ ಪ್ರದರ್ಶನದ ಮೂಲಕ ಮತದಾನ ಜಾಗೃತಿ ಅಭಿಯಾನ Read More »

ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಮೈಸೂರು ವಿವಿಗೆ ಎಷ್ಟನೇ ಸ್ಥಾನ ಗೊತ್ತಾ..?

ಮೈಸೂರು: ದೇಶದ ಅತ್ಯುತ್ತಮ ( NIRF RANKING ) ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಮೈಸೂರು ವಿವಿಗೆ 54 ನೇ ಸ್ಥಾನ ದೊರೆತಿದೆ. ಈ ಮೂಲಕ ರಾಜ್ಯದ ವಿವಿಗಳ ಪೈಕಿ ಮೈಸೂರು ವಿವಿ ಮೊದಲ ಸ್ಥಾನ ಗಳಿಸಿದೆ. ನಿನ್ನೆ ರಾಷ್ಟ್ರಪತಿಗಳಿಂದ ದೇಶದ ವಿವಿಧ ವಿವಿಗಳ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಲಾಯಿತು. ನವದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್​ ಪಟ್ಟಿ ಬಿಡುಗಡೆ ಮಾಡಿದರು. ನ್ಯಾಷನಲ್ ಇನ್ಸ್​ಟಿಟ್ಯೂಟ್ ರ್ಯಾಂಕಿಂಗ್ ಫ್ರೇಮ್ ವರ್ಕ್ ಅಡಿ ಕೇಂದ್ರ ಸರ್ಕಾರದ ಮಾನವ ಅಭಿವೃದ್ಧಿ ಸಚಿವಾಲಯದ ಆಶ್ರಯದಲ್ಲಿ

ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಮೈಸೂರು ವಿವಿಗೆ ಎಷ್ಟನೇ ಸ್ಥಾನ ಗೊತ್ತಾ..? Read More »

ತ್ರಿವೇಣಿ ಸಂಗಮದಲ್ಲಿ ಯುಗಾದಿ ಪುಣ್ಯ ಸ್ನಾನ ಮಾಡಿ ಪುನಿತರಾದ ಸಹಸ್ರಾರು ಜನ

ತಿ.ನರಸೀಪುರ: ಕಾಶಿಗಿಂತಲೂ ಗುಲಗಂಜಿ ತೂಕದಷ್ಟು ಪುಣ್ಯ ಕ್ಷೇತ್ರ ವೆಂದು ಪ್ರತೀತಿ ಹೊಂದಿರುವ ತ್ರಿವೇಣಿ ಸಂಗಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಯುಗಾದಿ ಪುಣ್ಯ ಸ್ನಾನ ಮಾಡಿ ಪುನಿತರಾದರು. ಪಟ್ಟಣದ ಅಗಸ್ತ್ಯೇಶ್ವರ ಮತ್ತು ಶ್ರೀ ಗುಂಜಾನರಸಿಂಹ ಸ್ವಾಮಿ ದೇವಲಾಯಗಳ ಮದ್ಯ ಭಾಗದಲ್ಲಿ ಹರಿಯುವ ಕಾವೇರಿ ಕಬಿನಿ ಮತ್ತು ಗುಪ್ತಗಾಮಿನಿಯಾಗಿ ಹರಿಯುವ ಸ್ಪಟಿಕ ಸರೋವರಗಳ ಸಂಗಮದ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ನಾನಾ ಕಡೆಯಿಂದ ಚಾಂದ್ರಾಮಾನ ಯುಗಾದಿ ಪ್ರಯುಕ್ತ ಆಗಮಿಸಿ ಬೆಳಗಿನ ಜಾವ 4 ಗಂಟೆಯಿಂದಲೆ ಪುಣ್ಯ ಸ್ನಾನ ಮಾಡಿದರು. ಪಟ್ಟಣಕ್ಕೆ ರಾತ್ರಿಯಿಂದಲೆ

ತ್ರಿವೇಣಿ ಸಂಗಮದಲ್ಲಿ ಯುಗಾದಿ ಪುಣ್ಯ ಸ್ನಾನ ಮಾಡಿ ಪುನಿತರಾದ ಸಹಸ್ರಾರು ಜನ Read More »

ಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಗುಡುಗು-ಮಿಂಚು ಸಹಿತ ಭಾರೀ ಆಲಿಕಲ್ಲು ಮಳೆ

ಮಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕಾಣಿಸಿಕೊಂಡ ಮೇಲ್ಮೆ ಸುಳಿಗಾಳಿ ಪರಿಣಾಮ, ಸುಬ್ರಹ್ಮಣ್ಯ ಹಾಗು ಜಿಲ್ಲೆಯ ಅನೇಕ ಕಡೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ಸುಬ್ರಹ್ಮಣ್ಯ, ಕಡಬ ಮತ್ತು ಸುತ್ತಲ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ವೇಳೆಗೆ ಗುಡುಗು-ಮಿಂಚು ಸಹಿತ ಭಾರೀ ಗಾಳಿ ಮಳೆಯಾಗಿದೆ. ಜತೆಗೆ ಆಲಿಕಲ್ಲು ಕೂಡ ಬೃಹತ್‌ ಪ್ರಮಾಣದಲ್ಲಿ ಬಿದ್ದಿವೆ. ಗಾಳಿ ಕೂಡ ಹೆಚ್ಚಿದ್ದು, ಬಿರುಸಾಗಿ ಬೀಸಿದ ಗಾಳಿಗೆ ಹಲವೆಡೆ ಮರಗಳು ಧರೆಶಾಯಿಯಾಗಿವೆ. ಅನೇಕ ಮಂದಿ ಕೃಷಿಕರ ರಬ್ಬರ್‌, ತೆಂಗು, ಅಡಿಕೆ ಮರ ಗಳು ನೆಲಕ್ಕುರುಳಿ ಅಪಾರ ಪ್ರಮಾಣದ

ಸುಬ್ರಹ್ಮಣ್ಯ: ಗುಡುಗು-ಮಿಂಚು ಸಹಿತ ಭಾರೀ ಆಲಿಕಲ್ಲು ಮಳೆ Read More »

Scroll to Top