September 2019

ಮೈಸೂರಿನ ಎನ್‌ಸಿಸಿ ವಿದ್ಯಾರ್ಥಿನಿಗೆ ಸ್ವಚ್ಛ ಭಾರತ್‌ ಪ್ರಶಸ್ತಿ

ಮೈಸೂರು: ರಾಷ್ಟ್ರಪತಿಗಳ ಸ್ವಚ್ಛ ಭಾರತ್‌ ಪ್ರಶಸ್ತಿಗೆ ಮೈಸೂರು ಯುವರಾಜ ಕಾಲೇಜಿನ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಎಸ್‌.ರಂಜಿತಾ ಅವರು ಎನ್‌ಸಿಸಿ ವಿಭಾಗದಿಂದ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಇವರು ವಿಜಯನಗರದ ನಿವಾಸಿ ಎನ್‌.ಕೆ.ಶಿವಾ ಹಾಗೂ ಗೀತಾ ದಂಪತಿಗಳ ಪುತ್ರಿ. ನಿನ್ನೆ ನವದೆಹಲಿಯಲ್ಲಿ ನಡೆದ ಕಾರ‍್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದು, ದೇಶದಲ್ಲಿಯೇ ಈ ಸಾಲಿನಲ್ಲಿ ಎನ್‌ಸಿಸಿ ವಿಭಾಗದಿಂದ ಪ್ರಶಸ್ತಿ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ಕರ್ನಾಟಕದಿಂದ ಮೊದಲ ಬಾರಿ ಎನ್‌ಸಿಸಿ ವಿದ್ಯಾರ್ಥಿನಿಗೆ ಈ ಪ್ರಶಸ್ತಿ […]

ಮೈಸೂರಿನ ಎನ್‌ಸಿಸಿ ವಿದ್ಯಾರ್ಥಿನಿಗೆ ಸ್ವಚ್ಛ ಭಾರತ್‌ ಪ್ರಶಸ್ತಿ Read More »

ಚಂದ್ರಯಾನ 2: ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಂ ಲ್ಯಾಂಡರ್​

ಬೆಂಗಳೂರು: ಜಾಗತಿಕವಾಗಿ ಭಾರತಕ್ಕೆ ಮಹತ್ವದ ಸ್ಥಾನ ಕಲ್ಪಿಸಿಕೊಡಲಿರುವ ಚಂದ್ರಯಾನ-2 ಪ್ರಮುಖ ಹಂತವಾಗಿ ವಿಕ್ರಂ ಲ್ಯಾಂಡರ್​ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗುವ ಪ್ರಕ್ರಿಯೆಯಲ್ಲಿ ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದೆ. ಇಸ್ರೋ ವಿಜ್ಞಾನಿಗಳು ಲ್ಯಾಂಡರ್​ ಕಳುಹಿಸಿದ ದತ್ತಾಂಶವನ್ನು ವಿಶ್ಲೇಷಣೆ ಮಾಡುತ್ತಿದ್ದಾರೆ. 2.1 ಕಿ.ಮೀ. ವರೆಗೆ ಚಲಿಸಿದ ನಂತರ ಸಿಗ್ನಲ್ ಸ್ಥಗಿತವಾಗಿದೆ. ದತ್ತಾಂಶ ವಿಶ್ಲೇಷಣೆ ಮಾಡಲಾಗುತ್ತಿದೆ ಎಂದು ಇಸ್ರೊ ಅಧ್ಯಕ್ಷ ಕೆ. ಶಿವನ್ ಮಾಹಿತಿ ನೀಡಿದರು. ಇಸ್ರೋ ವಿಜ್ಞಾನಿಗಳು ವಿಕ್ರಂ ಲ್ಯಾಂಡರ್​ನೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಚಂದ್ರನ

ಚಂದ್ರಯಾನ 2: ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಂ ಲ್ಯಾಂಡರ್​ Read More »

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಿಢೀರ್ ರಾಜಿನಾಮೆ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿ ಹೆಸರಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬೆನ್ನಲೆ ಪತ್ರ ಬರೆದಿರುವ ಅವರು, ‘ನನ್ನ ರಾಜೀನಾಮೆ ವೈಯಕ್ತಿಕ ನಿರ್ಧಾರ. ಇದಕ್ಕೆ ನೇರವಾಗಿ ಯಾರೊಬ್ಬರೂ ಕಾರಣವಲ್ಲ. ಇಷ್ಟು ದಿನ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದೆ. ಈ ಹಂತದಲ್ಲಿ ಹುದ್ದೆ ತೊರೆದು ಹೋಗುತ್ತಿರುವುದಕ್ಕೆ ಜನರ ಕ್ಷಮೆ ಯಾಚಿಸುತ್ತೇನೆ’. “ಪ್ರಜಾಪ್ರಭುತ್ವದ ಮೂಲ ಆಧಾರ ಸ್ತಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿವೆ. ದೇಶದ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಿಢೀರ್ ರಾಜಿನಾಮೆ Read More »

ದಸರಾ ಕ್ರೀಡಾಕೂಟ, ಯುವ ದಸರಾವನ್ನು ಉದ್ಘಾಟಿಸಲಿದ್ದಾರೆ ಪಿ.ವಿ ಸಿಂಧು..!

ಮೈಸೂರು: ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರಿಂದ 2019ರ ದಸರಾ ಕ್ರೀಡಾಕೂಟ ಹಾಗೂ ಯುವ ದಸರಾವನ್ನು ಉದ್ಘಾಟಿಸಲು ಮೈಸೂರು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಈ ಕುರಿತು ಪ್ರಕ್ರಿಯೆ ಆರಂಭಿಸಿರುವ ಅಧಿಕಾರಿಗಳು, ಸಿಂಧು ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಈಗಾಗಲೇ ಮೌಖಿಕವಾಗಿ ಆಹ್ವಾನಿಸಿದ್ದಾರೆ. ದಸರಾ ಕ್ರೀಡಾಕೂಟ ಹಾಗೂ ಯುವ ದಸರಾ ಕಾರ್ಯಕ್ರಮಗಳ ವೇಳಾಪಟ್ಟಿ, ಸ್ಥಳ ನಿಗದಿಯಾಗುತ್ತಿದ್ದಂತೆಯೇ ಸಿಂಧು ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗುವುದು ಎಂದು ಕ್ರೀಡಾ ಇಲಾಖೆ ಅಧಿಕಾರಿಗಳು ಮಾಹಿತಿ

ದಸರಾ ಕ್ರೀಡಾಕೂಟ, ಯುವ ದಸರಾವನ್ನು ಉದ್ಘಾಟಿಸಲಿದ್ದಾರೆ ಪಿ.ವಿ ಸಿಂಧು..! Read More »

ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಮತ್ತೆ ಭಾರಿ ಮಳೆ ಸುರಿಯುತ್ತಿದ್ದು ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಮತ್ತಷ್ಟು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಮಾನ ಇಲಾಖೆನೀಡಿದ್ದು, ಇದರ ಬೆನ್ನಲೆ ಕೊಡಗು ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರ ‘ರೆಡ್‌ ಅಲರ್ಟ್‌’ ಘೋಷಿಸಿದೆ. ಬೆಳಗ್ಗೆಯಿಂದ ಬಿಟ್ಟು ಬಿಡದೆ ಕೊಡಗಿನ ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಪರಿಣಾಮ ಮತ್ತೆ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಮಳೆಯಿಂದ ನಾಪೋಕ್ಲು ಭಾಗಮಂಡಲ ಮತ್ತು ಮಡಿಕೇರಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ರಸ್ತೆ ಮೇಲೆ 2 ಅಡಿ ನೀರು

ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ Read More »

ಗುಂಡಿಬಿದ್ದ ರಸ್ತೆಯಲ್ಲಿ ಚಂದ್ರಯಾನ ಮಾಡಿಸಿ ಬಿಬಿಎಂಪಿ ಕಣ್ತೆರೆಸಿದ ಮೈಸೂರಿನ ಕಲಾವಿದ

ಬೆಂಗಳೂರು: ಮೈಸೂರಿನ ಕಲಾವಿದ ಬಾದಲ್ ನಂಜುಂಡಸ್ವಾಮಿ ಬೆಂಗಳೂರಿನ ಹಳ್ಳಬಿದ್ದ ರಸ್ತೆಗಳ ಗುಂಡಿಗಳನ್ನು BBMP ಗಮನಕ್ಕೆ ತರಲು ಬಳಸಿದ ಐಡಿಯಾ ಈಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ನಗರದ ಹೇರೋಹಳ್ಳಿ ಮುಖ್ಯರಸ್ತೆಯಲ್ಲಿ ಗುಂಡಿಬಿದ್ದು ಆಳಾಗಿದ್ದನ್ನು ಗಮನಿಸಿದ ಮೈಸೂರು ಮೂಲದ ಬಾದಲ್ ನಂಜುಂಡಸ್ವಾಮಿ ಬೆಂಗಳೂರು ಮಹಾನಗರ ಪಾಲಿಕೆಯ ಗಮನ ಸೆಳೆಯಲು ನಟ ಪೂರ್ಣಚಂದ್ರ ಅವರಿಗೆ ಗಗನಯಾತ್ರಿಯ ವೇಷ ಧರಿಸಿ ಗಗನಯಾತ್ರಿಗಳು ಚಂದ್ರನ ಮೇಲ್ಮೈಯಲ್ಲಿ ನಡೆದಾಡುವಂತೆಯೇ ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ನಡೆದಾಡಿಸಿದ್ದಾರೆ. ನಂತರ ಈ ದೃಶ್ಯವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ

ಗುಂಡಿಬಿದ್ದ ರಸ್ತೆಯಲ್ಲಿ ಚಂದ್ರಯಾನ ಮಾಡಿಸಿ ಬಿಬಿಎಂಪಿ ಕಣ್ತೆರೆಸಿದ ಮೈಸೂರಿನ ಕಲಾವಿದ Read More »

ಪ್ರವಾಸಿಗರಿಗಾಗಿ 10 ಭಾಷೆಗಳಲ್ಲಿ ದಸರಾ ವೆಬ್‌ಸೈಟ್‌ ಲಭ್ಯ

ಮೈಸೂರು: 2019ರ ದಸರಾ ಮಹೋತ್ಸವದ ವೆಬ್‌ಸೈಟ್‌ಗೆ ಅಧಿಕೃತವಾಗಿ ಚಾಲನೆ ದೊರೆತಿದ್ದು, ಹಲವು ವಿಶೇಷತೆಗಳನ್ನು ಒಳಗೊಂಡಿದೆ. 2019ರ ಮೈಸೂರು ದಸರಾ ಮಹೋತ್ಸವ ಕುರಿತು ಎಲ್ಲಾ ಮಾಹಿತಿಗಳನ್ನು ನೀಡಲು ಕನ್ನಡ, ಇಂಗ್ಲಿಷ್, ಅರೇಬಿಕ್, ಚೈನಿಸ್, ಡಚ್, ಫ್ರೆಂಚ್, ಜರ್ಮನ್, ಇಟಲಿಯನ್, ಪೋರ್ಚುಗೀಸ್, ರಷ್ಯನ್, ಸ್ಪಾನಿಷ್ ಸೇರಿದಂತೆ ಒಟ್ಟು 10 ಭಾಷೆಗಳಲ್ಲಿ ಪ್ರವಾಸಿಗರಿಗಾಗಿ ವೆಬ್‌ಸೈಟ್‌ ತಯಾರಾಗಿದೆ. ಕಂಪ್ಯೂಟರ್, ಮೊಬೈಲ್, ಟ್ಯಾಬ್ ಕಂಪಾಟಿಬಲ್ ಮೂಲಕವೂ ದಸರಾ ವೆಬ್‌ಸೈಟ್‌ ತೆರೆದು ನೋಡ ಬಹುದಾಗಿದೆಯಲ್ಲದೆ, ಪುಷ್ ನೋಟಿಫಿಕೇಷನ್ ವ್ಯವಸ್ಥೆ ಹಾಗೂ ಅಲರ್ಟ್ ಸೌಲಭ್ಯ ಹೊಂದಿದೆ. ದಸರಾ

ಪ್ರವಾಸಿಗರಿಗಾಗಿ 10 ಭಾಷೆಗಳಲ್ಲಿ ದಸರಾ ವೆಬ್‌ಸೈಟ್‌ ಲಭ್ಯ Read More »

Scroll to Top