December 2019

helicopter-ride-in-mysuru-4

ಮೈಸೂರು ಅರಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮುಂದೂಡಿಕೆ

ಮೈಸೂರು: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ನಿಧನದ ಹಿನ್ನೆಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಇರುವುದರಿಂದ ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿದ್ದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಅರಮನೆ ಮಂಡಳಿಯ ಉಪನಿರ್ದೇಶಕರು ತಿಳಿಸಿದ್ದಾರೆ. ದಿನಾಂಕ: 29-12-2019 ರಿಂದ 31-12-2019 ರವರೆಗೆ ಸಂಜೆ 7 ರಿಂದ 9 ಗಂಟೆಯವರೆಗೆ ನಡೆಯಬೇಕಾಗಿದ್ದ ಸಾಂಸ್ಕøತಿಕ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಈ ದಿನಗಳಂದು ಅರಮನೆಯ ದೀಪಾಲಂಕಾರ ವ್ಯವಸ್ಥೆ ಇರುವುದಿಲ್ಲ. ಆದರೆ ಅರಮನೆಯು ಎಂದಿನಂತೆ ಪ್ರವಾಸಿಗರಿಗೆ ಬೆಳಿಗ್ಗೆ 10 ರಿಂದ ಸಂಜೆ 5-30 ರವರೆಗೆ […]

ಮೈಸೂರು ಅರಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮುಂದೂಡಿಕೆ Read More »

ಹೊಸ ವರ್ಷಾಚರಣೆ : ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ

ಮೈಸೂರು: ಇಂದು ರಾತ್ರಿ ಚಾಮುಂಡಿ ಬೆಟ್ಟದ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ ಬಾಲಕೃಷ್ಣ ಆದೇಶ ಹೊರಡಿಸಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆವರೆಗೆ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲಿನ ನಿವಾಸಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚಾಮುಂಡಿ ಬೆಟ್ಟ ವ್ಯೂ ಪಾಯಿಂಟ್ ನಲ್ಲಿ ಮೋಜು ಮಸ್ತಿಗೆ ತಾಣವಾಗುವ ಸಾಧ್ಯತೆ ಮತ್ತು ಮದ್ಯಪಾನ ಮಾಡಿ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ಈ ಹಿನ್ನೆಲೆ ಈ ಕ್ರಮ

ಹೊಸ ವರ್ಷಾಚರಣೆ : ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ Read More »

helicopter-ride-in-mysuru-4

2020ರ ಹೊಸ ವರ್ಷಾಚರಣೆ ಮುನ್ನ ಮೈಸೂರು ಪೊಲೀಸರ ಸೂಚನೆ ಗಮನಿಸಿ

ಮೈಸೂರು: 2020ರ ಹೊಸ ವರ್ಷಾಚರಣೆಯ ಸಂಬಂಧ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾರ್ವಜನಿರಿಗೆ ಮತ್ತು ವಿವಿಧ ಸಂಘ ಸಂಸ್ಥೆಗಳಿಗೆ ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಸೂಚನೆ ರವಾನಿಸಲಾಗಿದೆ. ಡಿ.31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯನ್ನು ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇ, ಸರ್ವಿಸ್ ಅಪಾರ್ಟ್‌ಮೆಂಟ್, ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಮಾಲ್ಸ್ ಮತ್ತು ಸಂಘ ಸಂಸ್ಥೆಗಳು ಮತ್ತು ವಿಶೇಷ ಕೂಟಗಳನ್ನು ಮಧ್ಯರಾತ್ರಿ 1 ರೊಳಗೆ ಮುಗಿಸಬೇಕು. ಅದೂ ಕೂಡ ಒಳಾವರಣದಲ್ಲಿ ಮಾತ್ರ ಕಾರ್ಯಕ್ರಮಗಳನ್ನು ನಡೆಸಬೇಕು.

2020ರ ಹೊಸ ವರ್ಷಾಚರಣೆ ಮುನ್ನ ಮೈಸೂರು ಪೊಲೀಸರ ಸೂಚನೆ ಗಮನಿಸಿ Read More »

ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಶ್ರೀ ಕೃಷ್ಣನಲ್ಲಿ ವಿಲೀನ

ಉಡುಪಿ: ಶ್ವಾಸಕೋಶ ಉಸಿರಾಟ ಸಮಸ್ಯೆಯಿಂದ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ(88) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಪೇಜಾವರ ಮಠದಲ್ಲಿ ಶ್ರೀ ಕೃಷ್ಣನಲ್ಲಿ ಲೀನರಾದರು. ನ್ಯುಮೋನಿಯಾ (ಶ್ವಾಸಕೋಶ ಉಸಿರಾಟ ಸಮಸ್ಯೆ)ಯಿಂದಾಗಿ ಡಿ.20 ಶುಕ್ರವಾರ ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡುತಿದ್ದರು. ಕಳೆದ ಎಂಟು ದಿನಗಳ ನಡುವೆ ಆರೋಗ್ಯ ತುಸು ಚೇತರಿಕೆ ಕಂಡಿದ್ದರೂ ಕೃತಕ ಉಸಿರಾಟ ಮೂಲಕ

ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಶ್ರೀ ಕೃಷ್ಣನಲ್ಲಿ ವಿಲೀನ Read More »

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನ ಹಾರಾಟ ಆರಂಭ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನ ಹಾರಾಟ ಆರಂಭವಾಗಿದ್ದು, ಬೆಂಗಳೂರು-ಕಲಬುರ್ಗಿ-ಹೈದರಾಬಾದ್‌ಗೆ ಶುಕ್ರವಾರ ಬೆಳಿಗ್ಗೆ ಏರ್‌-72 ಏರ್‌ ಇಂಡಿಯಾ ಅಲಯನ್ಸ್‌ ವಿಮಾನ ಪ್ರಯಾಣ ಆರಂಭಿಸಿದೆ. ಮೈಸೂರಿನಿಂದ 28 ಪ್ರಯಾಣಿಕರು ಟಿಕೇಟ್‌ ಕಾಯ್ದಿರಿಸಿದ್ದು, ಮೊದಲ ಪ್ರಯಾಣದಲ್ಲಿಯೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ಆರ್‌.ಮಂಜುನಾಥ್‌ ತಿಳಿಸಿದ್ದಾರೆ. ಇದೇ ವಿಮಾನ ಈ ಹಿಂದೆ ಮೈಸೂರು-ಕೊಚ್ಚಿ ನಡುವೆ ಪ್ರಯಾಣಿಸುತ್ತಿತ್ತು. ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರಿ ಕಾರ್ಪೆಟಿಂಗ್‌ ಕಾಮಗಾರಿ ನಡೆಯುತ್ತಿದೆ. ಮೈಸೂರು ಸೇರಿದಂತೆ ಕೆಲವು ನಗರಗಳಿಗೆ ಸಂಪರ್ಕ

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನ ಹಾರಾಟ ಆರಂಭ Read More »

ಮೈಸೂರಿನಲ್ಲಿ ಹೊಸವರ್ಷಕ್ಕೆ ಸಿದ್ದವಾಗಿದೆ ತಿರುಪತಿ ಮಾದರಿಯ 2 ಲಕ್ಷ ಲಡ್ಡು!

ಮೈಸೂರು: ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಪ್ರಯುಕ್ತ 01.01.2020 (ಬುಧವಾರ) ಬೆಳಿಗ್ಗೆ 4 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡುವನ್ನು ಭಕ್ತಾದಿಗಳಿಗೆ ವಿತರಿಸುವ ಕಾರ್ಯಕ್ರಮ ನಡೆಯಲಿದೆ. ಕಳೆದ ಹಲವಾರು ವರ್ಷಗಳಿಂದ ಲಡ್ಡುವಿತರಿಸುವ ಕಾರ್ಯವನ್ನು ನಡೆಸಿಕೊಂಡು ಬರಲಾಗಿದ್ದು, ಈ ವರ್ಷವೂ ಸಹ ನೂತನ ಕ್ರೈಸ್ತ ವರ್ಷಾರಂಭದ ಅಂಗವಾಗಿ ಜನವರಿ 1ರ ಬೆಳಿಗ್ಗೆ 4 ಗಂಟೆಯಿಂದ ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ “ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ”

ಮೈಸೂರಿನಲ್ಲಿ ಹೊಸವರ್ಷಕ್ಕೆ ಸಿದ್ದವಾಗಿದೆ ತಿರುಪತಿ ಮಾದರಿಯ 2 ಲಕ್ಷ ಲಡ್ಡು! Read More »

ಕಂಕಣ ಸೂರ್ಯಗ್ರಹಣ: ಬಾನಂಗಳದಲ್ಲಿ ನಡೆದ ಅಪರೂಪದ ವಿದ್ಯಮಾನವನ್ನು ಕಣ್ತುಂಬಿಕೊಂಡ ಸಾವಿರಾರು ವಿದ್ಯಾರ್ಥಿಗಳು

ಮೈಸೂರು: ಸೌರಮಂಡಲದ ಅತ್ಯಂತ ಅಪರೂಪದ ಕಂಕಣ ಸೂರ್ಯಗ್ರಹಣ ಇಂದು ವಿಶ್ವದ ವಿವಿಧೆಡೆ ಘಟಿಸಿದ್ದು, ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಈ ವಿಸ್ಮಯವನ್ನು ಲಕ್ಷಾಂತರ ಮಂದಿ ವೀಕ್ಷಿಸಿ ಚಕಿತಗೊಂಡರು. ಬೆಳಗ್ಗೆ 8.04ಕ್ಕೆ ಆರಂಭವಾದ ಸೂರ್ಯಗ್ರಹಣ ಬೆಳಿಗ್ಗೆ 11:11ಕ್ಕೆ ಅಂತ್ಯಗೊಂಡಿತು. ಮೈಸೂರಿನ ಮೈಸೂರು ಸೈನ್ಸ್‌ ಫೌಂಡೇಷನ್‌, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮೈಸೂರು ವಿಶ್ವ ವಿದ್ಯಾಲಯ ಸಹಯೋಗದಲ್ಲಿ ಇಂದು ಬೆಳಗ್ಗೆ 8ರಿಂದ 11.05ರವರೆಗೆ ಕ್ರಾಫರ್ಡ್‌ ಹಾಲ್‌ ಎದುರಿನ ವಿಶ್ವ ವಿದ್ಯಾಲಯದ ಓವೆಲ್‌ ಮೈದಾನದಲ್ಲಿ’ವಿಜ್ಞಾನ ಕೌತುಕ ವೀಕ್ಷಣೆಯ ಹಬ್ಬ’ ಆಯೋಜಿಸಿತ್ತು. ಎರಡು

ಕಂಕಣ ಸೂರ್ಯಗ್ರಹಣ: ಬಾನಂಗಳದಲ್ಲಿ ನಡೆದ ಅಪರೂಪದ ವಿದ್ಯಮಾನವನ್ನು ಕಣ್ತುಂಬಿಕೊಂಡ ಸಾವಿರಾರು ವಿದ್ಯಾರ್ಥಿಗಳು Read More »

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮಾದರಿ ಪ್ರತಿಮೆಗಳ ಅನಾವರಣ

ಮೈಸೂರು: ಮೈಸೂರು ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪ್ರಯಾಣಿಕರ ಮಾದರಿಯ 6 ಕಂಚಿನ ಪ್ರತಿಮೆಗಳು ಅನಾವರಣಗೊಂಡಿದೆ. ಡಿಆರ್’ಎಂ ಅರ್ಪಣ ಗರ್ಗ್ ಅವರು ಪ್ರತಿಮೆಗಳನ್ನು ಅನಾವರಣಗೊಳಿಸಿದರು. ರೈಲ್ವೆ ಪ್ರಯಾಣಿಕರ ಮಾದರಿಯ 6 ಶಿಲ್ಪಗಳ ಕಂಚಿನ ಪ್ರತಿಮೆಗಳು ನಿಜವಾಗದ ಪ್ರಯಾಣಿಕರ ಮಾದರಿಯಲ್ಲಿ ನಿರ್ಮಿಸಲಾಗಿದೆ ಎಂದು ತಿಳಿಸಿದರು. ಶಿಲ್ಪಿ ಅರುಣ್ ಯೋಗಿರಾಜ್ ಅವರು 4 ತಿಂಗಳ ನಿರಂತರ ಶ್ರಮದಿಂದ ಈ ಪ್ರತಿಮೆಗಳನ್ನುನಿರ್ಮಿಸಿದ್ದಾರೆ.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮಾದರಿ ಪ್ರತಿಮೆಗಳ ಅನಾವರಣ Read More »

ಮೈಸೂರಿನಲ್ಲಿ ಇಂದಿನಿಂದ ಮಾಗಿ ಉತ್ಸವ: 10 ದಿನಗಳ ಕಾಲ ಮನರಂಜನೆ ನೀಡಲು ಅರಮನೆ ಅಂಗಳ ಸಜ್ಜು

ಮೈಸೂರು: ದಸರಾ ನಂತರ ವರ್ಷಾಂತ್ಯ-2020ರ ಹೊಸ ವರ್ಷಾರಂಭದಲ್ಲಿ ವಿಶಿಷ್ಟವಾಗಿ ಪ್ರವಾಸಿಗರನ್ನು ಆಕರ್ಷಿಸಲು ಮೈಸೂರು ಜಿಲ್ಲಾಡಳಿತ ಸಜ್ಜಾಗಿದೆ. ಹೊಸ ವರ್ಷಾಚರಣೆಯ ಸಂಭ್ರಮ ಇಮ್ಮಡಿಗೊಳಿಸುವ ‘ಮೈಸೂರು ಮಾಗಿ ಉತ್ಸವ’ ಮತ್ತೆ ರಸದೌತಣ ಉಣಬಡಿಸಲು ಬಂದಿದೆ. ಅರಮನೆ ಅಂಗಳದಲ್ಲಿ ಡಿ.24ರಂದು ಸಂಜೆ 4ಕ್ಕೆ ಚಾಲನೆ ದೊರೆಯಲಿದ್ದು, 10 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳ ಮೂಲಕ ಮನರಂಜನೆ ನೀಡಲು ಸಜ್ಜಾಗಿದೆ. ಫ‌ಲಪುಷ್ಪ ಪ್ರದರ್ಶನ: ಮಾಗಿ ಉತ್ಸವ ಅಂಗವಾಗಿ ಅರಮನೆ ಆವರಣದಲ್ಲಿ ಫ‌ಲಪುಷ್ಪ ಪ್ರದರ್ಶನ ಏರ್ಪಡಿಸಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಫ‌ಲಪುಷ್ಪ ಪ್ರದರ್ಶನಕ್ಕೆ

ಮೈಸೂರಿನಲ್ಲಿ ಇಂದಿನಿಂದ ಮಾಗಿ ಉತ್ಸವ: 10 ದಿನಗಳ ಕಾಲ ಮನರಂಜನೆ ನೀಡಲು ಅರಮನೆ ಅಂಗಳ ಸಜ್ಜು Read More »

66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ; ಸ್ಯಾಂಡಲ್ ವುಡ್ ಗೆ 11 ರಾಷ್ಟ್ರ ಪ್ರಶಸ್ತಿ

ನವದೆಹಲಿ: ಇಂದು ದೆಹಲಿಯಲ್ಲಿ 66ನೇಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ ನಡೆದಿದ್ದು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ. 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡ ಸಿನಿಮಾರಂಗ ಹನ್ನೊಂದು ಪ್ರಶಸ್ತಿಯನ್ನು ಗೆದ್ದುಗೊಂಡಿದೆ. ಸ್ಯಾಂಡಲ್ ವುಡ್ ನ ನಾತಿ ಚರಾಮಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಸಂಪ್ರದಾಯದ ಪ್ರಕಾರ ರಾಷ್ಟ್ರ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಪ್ರದಾನ ಮಾಡಬೇಕಿತ್ತು. ಆದರೆ ಈ ಬಾರಿ ಕೋವಿಂದ್ ಅವರ ಅನುಪಸ್ಥಿತಿಯಲ್ಲಿ ಉಪರಾಷ್ಟ್ರಪತಿ ನಾಯ್ಡು ಪ್ರಶಸ್ತಿ ನೀಡಿದ್ದಾರೆ.

66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ; ಸ್ಯಾಂಡಲ್ ವುಡ್ ಗೆ 11 ರಾಷ್ಟ್ರ ಪ್ರಶಸ್ತಿ Read More »

Scroll to Top