ಮೈಸೂರಿನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು: ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆ
ಮೈಸೂರು: ಮಹಾಮಾರಿ ಕೊರೋನಾ ಸೋಂಕು ಮತ್ತೆ ಇಬ್ಬರಲ್ಲಿ ಇರುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. ಮೈಸೂರಿನ ನಂಜನಗೂಡಿನಲ್ಲಿ ರುವ ಜುಬಿಲಿಯಂಟ್ ಔಷಧ ಕಂಪನಿಯ ಮತ್ತೀಬ್ಬರು ನೌಕರರ ಲ್ಲಿ ಕೊರೋನಾ ಸೋಂಕು ಇರುವುದು ಖಚಿತವಾಗಿದೆ. ಇದರಿಂದಾಗಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 14 ಕ್ಕೆ ಏರಿದೆ. ಅಲ್ಲದೆ ಇದೇ ಕಾರ್ಖಾನೆಯ ಮತ್ತೆ ಐದು ಮಂದಿ ಯಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿದೆ. ಇದರಿಂದಾಗಿ ಮತ್ತಷ್ಟು ಆತಂಕ ಹೆಚ್ಚಾಗಿದೆ.
ಮೈಸೂರಿನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು: ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆ Read More »