March 2020

ರಾಜ್ಯದಲ್ಲಿ ಒಂದು ಲಕ್ಷ ಜನರಿಗೆ ಕೊರೋನಾ ಸಾಧ್ಯತೆ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್‌ ವ್ಯಾಪಕವಾಗಿ ಹಬ್ಬುತ್ತಿದ್ದು, ಸುಮಾರು ಒಂದು ಲಕ್ಷ ಜನರಿಗೆ ಸೋಂಕು ತಗುಲಬಹುದೆಂದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು ಕೊರೋನಾ ವೈರಸ್ ಭೀತಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈಗಾಗಲೇ 39 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಂದು ಲಕ್ಷ ಜನಕ್ಕೆ ಸೋಂಕು ತಗುಲಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಕ್ವಾರಂಟೈನ್ ಮಾಡೋಕೆ 20 ಸಾವಿರ ಹೋಟೆಲ್ ರೂಮ್ ಪಡೆಯಲು ಮುಂದಾಗಿದ್ದು, ಎಲ್ಲಾ ವ್ಯವಸ್ಥೆ […]

ರಾಜ್ಯದಲ್ಲಿ ಒಂದು ಲಕ್ಷ ಜನರಿಗೆ ಕೊರೋನಾ ಸಾಧ್ಯತೆ..! Read More »

ಮೈಸೂರಿನ ಕಂಪನಿಯೊಂದರಿಂದ 1000 ವೆಂಟಿಲೇಟರ್‌ ಖರೀದಿಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಕಂಪನಿಯೊಂದರಿಂದ ಒಂದು ಸಾವಿರ ವೆಂಟಿಲೇಟರ್ ಖರೀದಿಗೆ ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು‌ ಹೇಳಿದರು. ಸೋಮವಾರ ಅಧಿಕಾರಿಗಳು ಹಾಗೂ ಆರೋಗ್ಯ ಸಲಕರಣೆಗಳನ್ನು ಪೂರೈಕೆ ಮಾಡುವ ಕಂಪನಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ ಸಚಿವ ಶ್ರೀರಾಮುಲು, ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಕ್ಕೆ ಅಗತ್ಯವಾಗಿ ಬೇಕಾಗಿರುವ ಸಲಕರಣೆಗಳನ್ನು ಖರೀದಿ ಮಾತುಕತೆ ನಡೆಸಿದರು. ಈಗಾಗಿ ಮೈಸೂರಿನ ಸ್ಕಾನರ್ ರೇ ಕಂಪನಿಯಿಂದ ಒಂದು ಸಾವಿರ ವೆಂಟಿಲೇಟರ್ ಖರೀದಿಗೆ ನಿರ್ಧರಿಸಲಾಗಿದೆ. ವೆಂಟಿಲೇಟರ್ ಪೂರೈಕೆ

ಮೈಸೂರಿನ ಕಂಪನಿಯೊಂದರಿಂದ 1000 ವೆಂಟಿಲೇಟರ್‌ ಖರೀದಿಗೆ ಮುಂದಾದ ರಾಜ್ಯ ಸರ್ಕಾರ Read More »

ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ: ಐಟಿ ರಿಟರ್ನ್ಸ್‌, ಆಧಾರ್‌ – ಪ್ಯಾನ್‌ ಲಿಂಕ್‌ ಗಡುವು ವಿಸ್ತರಣೆ

ನವದೆಹಲಿ: ಆದಾಯ ತೆರಿಗೆ ಪಾವತಿ, ತೆರಿಗೆ ಸಂಬಂಧಿತ ಎಲ್ಲಾ ವಿವರ ಸಲ್ಲಿಕೆ ಅವಧಿ ವಿಸ್ತರಣೆ ಹಾಗೂ ಆಧಾರ್-ಪ್ಯಾನ್ ಕಾರ್ಡ್ ಲಿಂಕ್ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2018-19ರ ಆರ್ಥಿಕ ವರ್ಷದ ಆದಾಯ ತೆರಿಗೆ (ಐಟಿ) ರಿಟರ್ನ್ಸ್‌ನ ಗಡುವನ್ನು 2020 ರ ಜೂನ್ 30 ಕ್ಕೆ ವಿಸ್ತರಿಸಲಾಗಿದೆ. ಮಾರ್ಚ್ 31ರವರೆಗೆ ಇದ್ದ ಗಡುವನ್ನು ಜೂನ್‌ 30, 2020ಕ್ಕೆ ವಿಸ್ತರಿಸಲಾಗಿದೆ. ಅಲ್ಲದೆ, ವಿಳಂಬದ ಪಾವತಿಗಳಿಗಾಗಿ

ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ: ಐಟಿ ರಿಟರ್ನ್ಸ್‌, ಆಧಾರ್‌ – ಪ್ಯಾನ್‌ ಲಿಂಕ್‌ ಗಡುವು ವಿಸ್ತರಣೆ Read More »

ಕರ್ನಾಟಕದಲ್ಲಿ ಒಂದೇ ದಿನ 7 ಕೊರೊನಾ ಪ್ರಕರಣ ದಾಖಲು: ದೇಶದಲ್ಲೇ 3ನೇ ಸ್ಥಾನ

ಬೆಂಗಳೂರು: ಕರ್ನಾಟಕದಲ್ಲಿ 33ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ.‌ ರಾಜ್ಯದಲ್ಲಿ ಒಂದೇ ದಿನ 7 ಕೊರೊನಾ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಖಚಿತಪಡಿಸಿದೆ. ಮಾರ್ಚ್ 21ರಂದು 5, ಮಾರ್ಚ್ 22ರಂದು 6 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಆದ್ರೆ, ಇವತ್ತು (ಮಾರ್ಚ್ 23) ಒಂದೇ ದಿನ ಹೊಸ 7 ಕೊರೋನಾ ಕೇಸ್‌ಗಳು ಪತ್ತೆಯಾಗಿವೆ. ಈ ಮೂಲಕ ಕರುನಾಡಲ್ಲಿ ಕೊರೋನಾ ಸೋಂಕಿತ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ, ಕೇರಳ ಬಳಿಕ ಕರ್ನಾಟಕಕ್ಕೆ 3ನೇ ಸ್ಥಾನಕ್ಕೇರಿದೆ.

ಕರ್ನಾಟಕದಲ್ಲಿ ಒಂದೇ ದಿನ 7 ಕೊರೊನಾ ಪ್ರಕರಣ ದಾಖಲು: ದೇಶದಲ್ಲೇ 3ನೇ ಸ್ಥಾನ Read More »

ಮೈಸೂರಿನಲ್ಲಿ ಮತ್ತೊಂದು ಕೊರೋನಾ ವೈರಸ್ ಪತ್ತೆ

ಮೈಸೂರು: ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಎರಡಕ್ಕೆ ಏರಿದೆ. ದುಬೈನಿಂದ ಮೈಸೂರಿಗೆ ಬಂದಿದ್ದ 46ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತನಿಗೆ ನಗರದ ಕೆಆರ್ ಆಸ್ಪತ್ರೆಯಯ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ವೈರಸ್​ ಮಟ್ಟ ಹಾಕಲು ರಾಜ್ಯ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದಾಗ್ಯೂ ವೈರಸ್ ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿಲ್ಲ. ಭಾನುವಾರ ಒಂದೇ ದಿನ 6 ಹೊಸ ಪ್ರಕರಣ ದಾಖಲಾಗಿದ್ದವು. ಸೋಮವಾರ ಕೂಡ ಕೊರೋನಾ ಅಟ್ಟಹಾಸ ಮುಂದುವರಿದಿದ್ದು,

ಮೈಸೂರಿನಲ್ಲಿ ಮತ್ತೊಂದು ಕೊರೋನಾ ವೈರಸ್ ಪತ್ತೆ Read More »

helicopter-ride-in-mysuru-4

ಮಾರ್ಚ್ 31ರ ವರೆಗೂ ಮೈಸೂರು ಸೇರಿ ರಾಜ್ಯದ 9 ಜಿಲ್ಲೆಗಳು ಲಾಕ್ ಡೌನ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಆತಂಕ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರಕಾರ ಇಂದು ಒಂಬತ್ತು ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಹೊರಡಿಸಿದೆ. ಬೆಂಗಳೂರು ಸೇರಿದಂತೆ 9 ಜಿಲ್ಲೆಗಳನ್ನು ಮಾರ್ಚ್.31ರವರೆಗೂ ಲಾಕ್ ಡೌನ್ ಮಾಡುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಯಾವ ಜಿಲ್ಲೆಗಳು ಲಾಕ್ ಡೌನ್: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಮೈಸೂರು, ಕೊಡಗು, ಮಂಗಳೂರು, ಕರ್ನಾಟಕದಲ್ಲಿ ಕೊರೋನ ವೈರಾಣುವನ್ನು ನಿಗ್ರಹ ಮಾಡುವ ದೃಷ್ಟಿಯಿಂದ ಕೈಗೊಂಡಿರುವ ತುರ್ತು ನಿರ್ಧಾರಗಳು. ರಾಜ್ಯದಲ್ಲಿ ನಾಳೆ

ಮಾರ್ಚ್ 31ರ ವರೆಗೂ ಮೈಸೂರು ಸೇರಿ ರಾಜ್ಯದ 9 ಜಿಲ್ಲೆಗಳು ಲಾಕ್ ಡೌನ್ Read More »

ಕೊರೋನಾ ವೈರಸ್ ಭೀತಿ: ಮಾ.31ರವರೆಗೆ ಎಲ್ಲಾ ಪ್ರಯಾಣಿಕ ರೈಲು ಸಂಚಾರ ರದ್ದು

ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆ ಮಾರ್ಚ್ 31ರ ಮಧ್ಯ ರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ಪ್ಯಾಸೆಂಜರ್ ರೈಲು ಸಂಚಾರ ಸ್ಥಗಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಭಾನುವಾರ ಈ ಕುರಿತು ರೈಲ್ವೆ ಅಧಿಕೃತ ಆದೇಶ ಹೊರಡಿಸಿದೆ. ರೈಲ್ವೆಯಲ್ಲಿ ಪ್ರಯಾಣ ಮಾಡಿದ 12 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ಖಚಿತವಾಗಿತ್ತು. ‘ಜನತಾ ಕರ್ಫ್ಯೂ’ಗೆ ಬೆಂಬಲ ನೀಡಿ ಭಾನುವಾರ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಗೂಡ್ಸ್ ರೈಲುಗಳು ಎಂದಿನಂತೆ

ಕೊರೋನಾ ವೈರಸ್ ಭೀತಿ: ಮಾ.31ರವರೆಗೆ ಎಲ್ಲಾ ಪ್ರಯಾಣಿಕ ರೈಲು ಸಂಚಾರ ರದ್ದು Read More »

ಕೊರೋನಾ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಯನ್ನ ಮುಂದೂಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೋನಾ ತಡೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಂಡಿದೆ. ಈ ನಿಒಟ್ಟಿನಲ್ಲಿ SSLC ಪರೀಕ್ಷೆ ಕೂಡ ಮೂಂದೂಡಿಕೆಯಾಗಿದೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ

ಕೊರೋನಾ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ Read More »

ಮೈಸೂರಿನಲ್ಲಿ ಮೊದಲ ಕೊರೋನಾ ವೈರಸ್ ಪತ್ತೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಕೊರೋನಾ ವೈರಸ್ ಪತ್ತೆಯಾಗಿದೆ. ದುಬೈನಿಂದ ಆಗಮಿಸಿದ್ದ 35 ವರ್ಷದ ವ್ಯಕ್ತಿಗೆ ಸೋಂಕು ತಗುಳಿರುವುದು ದೃಢಪಟ್ಟಿದೆ. ದುಬೈನಿಂದ ಗೋವಾ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ಸೊಂಕಿತ ನಂತರದಲ್ಲಿ ಮೈಸೂರಿಗೆ ಆಗಮಿಸಿದ್ದ ಎಂದು ಮಾಹಿತಿ ತಿಳಿದುಬಂದಿದೆ. ಮೈಸೂರಿನ‌ ಕೆ.ಆರ್. ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೈಸೂರಿನಲ್ಲಿ ಮೊದಲ ಕೊರೋನಾ ವೈರಸ್ ಪತ್ತೆ Read More »

ಚಾಮುಂಡಿ ತಾಯಿಗೂ ತಟ್ಟಿದ ಕೊರೋನ ಭೀತಿ…! ದರ್ಶನ ಪಡೆಯಲು ಬಂದವರಿಗೆ ಸ್ಯಾನಿಟೈಸರ್ ಕಡ್ಡಾಯ

ಮೈಸೂರು: ನಾಡಿನ ಅಧಿದೇವತೆ ಚಾಮುಂಡೇಶ್ವರಿ ತಾಯಿಯನ್ನು ಬೀಡದ ಕೊರಾನಾ ಮಹಾ ಮಾರಿ. ಚಾಮುಂಡೇಶ್ವರಿ ದರ್ಶನ ಪಡೆಯಲು ಬಂದ ಭಕ್ತರಿಗೆ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ನಾಡದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಸ್ಯಾನಿಟೈಸರ್ ನೀಡಿ ಕೈ ಸ್ವಚ್ಚಗೊಳಿಸಿದ ನಂತರ ಒಳಗೆ ಬಿಡಲಾಗುತ್ತಿದೆ. ಶುಕ್ರವಾರವಾದ ಇಂದು ಜನದಟ್ಟಣೆಯಾಗುವ ಹಿನ್ನೆಲೆ ದೇವಾಲಯದ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ದೇವಾಲಯದ ಆಡಳಿತ ಮಂಡಲಿ ವಿಐಪಿ, ವಿಶೇಷ ದರ್ಶನ ರದ್ದುಗೊಳಿಸಿದೆ. ಹತ್ತತ್ತು ಮಂದಿಯನ್ನ ಮಾತ್ರ ದರ್ಶನಕ್ಕೆ ಬಿಡಲಾಗುತ್ತಿದೆ.

ಚಾಮುಂಡಿ ತಾಯಿಗೂ ತಟ್ಟಿದ ಕೊರೋನ ಭೀತಿ…! ದರ್ಶನ ಪಡೆಯಲು ಬಂದವರಿಗೆ ಸ್ಯಾನಿಟೈಸರ್ ಕಡ್ಡಾಯ Read More »

Scroll to Top