ಅ.31 ರಂದು ಹುಣ್ಣಿಮೆ: ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದಲ್ಲಿ ಸಾರ್ವಜನಿಕರ ಪ್ರವೇಶ ನಿಷಿದ್ಧ
ಮೈಸೂರು: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 31 ರಂದು ಹುಣ್ಣಿಮೆ ಹಿನ್ನೆಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ಹಾಗೂ ದೇವರ ದರ್ಶನವನ್ನು ರದ್ಧುಪಡಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶ ಹೊರಡಿಸಿದ್ದಾರೆ. ಅಂದು ದೇವಾಲಯದಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮಗಳನ್ನು ದೇಗುಲದ ಅರ್ಚಕರು ಮತ್ತು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ದೇಗುಲದ ಒಳಭಾಗದಲ್ಲಿ ಎಂದಿನಂತೆ ನಡೆಸಬಹುದು ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿರುತ್ತಾರೆ.
ಅ.31 ರಂದು ಹುಣ್ಣಿಮೆ: ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದಲ್ಲಿ ಸಾರ್ವಜನಿಕರ ಪ್ರವೇಶ ನಿಷಿದ್ಧ Read More »