October 2020

ದಸರಾ ಗಜಪಡೆಯ ಮಾವುತರು, ಕಾವಾಡಿಗರಿಗೆ ಇಂದು ಕೋವಿಡ್‌ ಪರೀಕ್ಷೆ ನಡೆಸಲಾಯಿತು

ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಅರಮನೆಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆ ಮಾವುತರಿಗೆ ಇಂದು ಕೋವಿಡ್‌ ಪರೀಕ್ಷೆ ನಡೆಸಲಾಯಿತು. ಕೊರೋನಾ ಮುಂಜಾಗ್ರತಾ ಕ್ರಮವಾಗಿ ಮೈಸೂರಿನ ಅರಮನೆಯಲ್ಲಿ ದಸರಾ ಆನೆಗಳ ಜತೆ ಬೀಡುಬಿಟ್ಟಿರುವ ಮಾವುತರು, ಕಾವಾಡಿಗಳಿಗೆ ಇಂದು ಕೊರೋನಾ ಟೆಸ್ಟ್ ಮಾಡಲಾಗಿದೆ. 5 ಆನೆಗಳ ಮಾವುತ, ಕಾವಾಡಿ ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೊರೋನಾ ಟೆಸ್ಟ್ ಮಾಡಲಾಯಿತು. 15ಕ್ಕೂ ಹೆಚ್ಚು ಮಾವುತ ಕಾವಾಡಿಗಳು ಆ್ಯಂಟಿಜನ್ ರ್ಯಾಪಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ಇಂದು ಸಂಜೆಯೊಳಗೆ ಮಾವುತ ಕಾವಾಡಿಗಳ ಕೊರೋನಾ ಟೆಸ್ಟ್ ರಿಸಲ್ಟ್ ಬರಲಿದೆ. […]

ದಸರಾ ಗಜಪಡೆಯ ಮಾವುತರು, ಕಾವಾಡಿಗರಿಗೆ ಇಂದು ಕೋವಿಡ್‌ ಪರೀಕ್ಷೆ ನಡೆಸಲಾಯಿತು Read More »

ವಿಶ್ವದ ಅತಿ ಉದ್ದದ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಹಿಮಾಚಲ ಪ್ರದೇಶ: ರೋಹ್ತಂಗ್‍ನಲ್ಲಿ ವಿಶ್ವದ ಅತಿ ಉದ್ದದ ಹೆದ್ದಾರಿ, ಅಟಲ್ ಸುರಂಗ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸುರಂಗವನ್ನು ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಅತ್ಯಾಧುನಿಕ ವಿಶೇಷಣಗಳೊಂದಿಗೆ ನಿರ್ಮಿಸಲಾಗಿದ್ದು, ಸಮುದ್ರ ಮಟ್ಟದಿಂದ ಸರಾಸರಿ 3000 ಮೀಟರ್ ಎತ್ತರದಲ್ಲಿ ನಿರ್ಮಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಪದೇ ಪದೇ ಹಿಮಪಾತವಾಗುತ್ತಿದ್ದ ಮನಾಲಿ ಮತ್ತು ಲೇಹ್ ನಡುವೆ ಆರು ತಿಂಗಳ ಕಾಲ ಸಂಚಾರ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅಟಲ್ ಸುರಂಗದ ವಿಶೇಷತೆಗಳಿವು: ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ

ವಿಶ್ವದ ಅತಿ ಉದ್ದದ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ Read More »

ಮೈಸೂರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ ಸುಧಾ ಮೂರ್ತಿ

ಮೈಸೂರು: ಇನ್ಫೋಸಿಸ್‌ ಪ್ರತಿಷ್ಠಾನದ ಸುಧಾ ಮೂರ್ತಿಯವರು ಮೈಸೂರು ಮೃಗಾಲಯಕ್ಕೆ ಮತ್ತೊಮ್ಮೆ ದೇಣಿಗೆ ನೀಡಿದ್ದಾರೆ. ಕೋವಿಡ್ -19 ರ ಕಷ್ಟದ ಸಮಯದಲ್ಲಿ ಸುಧಾ ಮೂರ್ತಿಯವರ ಈ ರೀತಿಯ ಉದಾರವಾದ ದೇಣಿಗೆ ಅತ್ಯಮೂಲ್ಯ ಮತ್ತು ಇತರರಿಗೆ ಸ್ಫೂರ್ತಿಯಾಗಿದೆ. ಜಯಚಾಮರಾಜೇಂದ್ರ ಮೃಗಾಲಯದ ಪ್ರಾಣಿಗಳ ಆರೋಗ್ಯ ಹಾಗೂ ನಿರ್ವಹಣೆಗೆ ಇನ್ಫೋಸಿಸ್ ಫೌಂಡೇಶನ್​ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರು 20 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕೊರೊನಾ ಸಂಕಷ್ಟ ಎದುರಿಸುತ್ತಿರುವ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಈವೆರೆಗೆ ₹40 ಲಕ್ಷ ನೀಡಿದ್ದಾರೆ. ಈ ಹಿಂದೆ ಕೊರೊನಾ ಲಾಕ್​ಡೌನ್​ ಹಿನ್ನೆಲೆ

ಮೈಸೂರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ ಸುಧಾ ಮೂರ್ತಿ Read More »

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ವಿವರ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಗಜಪಯಣಕ್ಕೆ ಚಾಲನೆ ನೀಡಲಾಗಿದ್ದು ಗಜಪಡೆಗಳು ಮೈಸೂರಿನತ್ತ ಪಯಣ ಬೆಳಸಿವೆ. ಈ ಬಾರಿಯ ದಸರಾ ಮಹೋತ್ಸವದಲ್ಲಿ ಕೇವಲ ಐದು ಆನೆಗಳು ಪಾಲ್ಗೊಳ್ಳುತ್ತಿದ್ದು ಅಭಿಮನ್ಯು, ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ಮೈಸೂರಿಗೆ ಆಗಮಿಸಿವೆ. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ವಿವರ ಇಂತಿದೆ: ಅಭಿಮನ್ಯು: ಗಂಡಾನೆ 54ವರ್ಷ, ಮತ್ತಿಗೋಡು ಆನೆ ಶಿಬಿರ, ವಸಂತ ಮಾವುತ, ಕಾವಾಡಿ ರಾಜು, ಶರೀರದ ಎತ್ತರ 2.68ಮೀಟರ್, ಶರೀರದ ಉದ್ದ 3.51ಮೀಟರ್, ಅಂದಾಜು ತೂಕ

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ವಿವರ Read More »

ಮೈಸೂರು ದಸರಾ ಮಹೋತ್ಸವ: ಗಜಪಯಣಕ್ಕೆ ಚಾಲನೆ;- ಮೈಸೂರಿನತ್ತ ಗಜಪಡೆ ಪಯಣ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗಿದ್ದು ಗಜಪಡೆಗಳು ಮೈಸೂರಿನತ್ತ ಪಯಣ ಬೆಳಸಿವೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ನಡೆಯಲಿದೆ. ಹೀಗಾಗಿ ವೀರನಹೊಸಳ್ಳಿಯಲ್ಲಿ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಐದು ಆನೆಗಳ ತಂಡವನ್ನು ವೀರನಹೊಸಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕರೆತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೇವಲ ಅಧಿಕಾರಿಗಳಷ್ಟೇ ಭಾಗಿಯಾಗಿದ್ದರು. ಜನಪ್ರತಿನಿಧಿಗಳು ಭಾಗಿಯಾಗಿಲ್ಲ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಪಂ ಸಿಇಒ ಡಿ.ಭಾರತಿ,

ಮೈಸೂರು ದಸರಾ ಮಹೋತ್ಸವ: ಗಜಪಯಣಕ್ಕೆ ಚಾಲನೆ;- ಮೈಸೂರಿನತ್ತ ಗಜಪಡೆ ಪಯಣ Read More »

Scroll to Top