ಮೈಸೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜನೆಗೆ ಅನುಮತಿ ಪಡೆಯುವುದು ಕಡ್ಡಾಯ
ಮೈಸೂರು: ಕೋವಿಡ್-19 ಸಾಂಕ್ರಾಮಿಕ ರೋಗವು ಎಲ್ಲೆಡೆ ಹರಡುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಹಾಗೂ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕ ಒಳಾಂಗಣ ಹಾಗೂ ಹೊರಾಂಗಣ ಕಾರ್ಯಕ್ರಮಗಳಿಗೆ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಕೆಲವು ನಿರ್ದೇಶನಗಳನ್ನು ನೀಡಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ಒಳಾಂಗಣ ಮತ್ತು ಹೊರಾಂಗಣದಲ್ಲಿ ಆಯೋಜಿಸುವ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಕಾರ್ಯವ್ಯಾಪ್ತಿಯ ಸಹಾಯಕ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆಯೋಜಿಸುವ ಕಾರ್ಯಕ್ರಮಕ್ಕೆ ಕೋವಿಡ್-19 ಮಾರ್ಗಸೂಚಿಗಳನ್ನು […]
ಮೈಸೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜನೆಗೆ ಅನುಮತಿ ಪಡೆಯುವುದು ಕಡ್ಡಾಯ Read More »