Karnataka

ಕೊಡಗಿನಲ್ಲಿ ಭೂಕುಸಿತ; ಮೂವರು ಸಾವು, ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮಹಾಮಳೆ ಮುಂದುವರೆದಿದ್ದು ಭೂ ಕುಸಿತಕ್ಕೆ ಮೂವರು ಬಲಿಯಾಗಿದ್ದಾರೆ. ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ಕೊರಂಗಾಲ ಬಳಿ ಈ ಘಟನೆ ನಡೆದಿದ್ದು ಭೂ ಕುಸಿತಕ್ಕೆ ಮೂವರು ಬಲಿಯಾಗಿದ್ದಾರೆ. ಇನ್ನು ಘಟನೆಯಲ್ಲಿ ಮತ್ತಿಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಕೇಂದ್ರ ಸಚಿವ ಸದಾನಂದಗೌಡ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ಹಲವೆಡೆ ಮುಳುಗಡೆ ಪ್ರದೇಶದಲ್ಲಿ ಸಿಲುಕಿದ ಜನರನ್ನು NDRF ತಂಡ, ಕೊಡಗು ಪೋಲಿಸರಿಂದ ರಕ್ಷಣೆ ಮಾಡುತಿದ್ದಾರೆ. ಈಗಾಗಲೆ 20ಕ್ಕೂ ಹೆಚ್ಚು […]

ಕೊಡಗಿನಲ್ಲಿ ಭೂಕುಸಿತ; ಮೂವರು ಸಾವು, ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ Read More »

ಕೊಡಗಿನಲ್ಲಿ ಮತ್ತೆ ಧಾರಾಕಾರ ಮಳೆ: ‘ರೆಡ್‌ ಅಲರ್ಟ್‌’ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದ್ದು, ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ. ಭಾಗಮಂಡಲದಲ್ಲಿ ಕಾವೇರಿ ನದಿಯ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ನಿರಂತರ ಮಳೆಯಿಂದಾಗಿ ಜನರು ಹೊರಗೆ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ಗುಡ್ಡ ಕುಸಿದಿದೆ. ಮಾಕುಟ್ಟದಲ್ಲಿ ಸೇತುವೆ ಕುಸಿದ ಪರಿಣಾಮ ಕೇರಳ ಕೊಡಗು ಸಂಚಾರ ರದ್ದಾಗಿದೆ. ಭಾರೀ ಮಳೆಗೆ ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಭಾಗಮಂಡಲ ನಾಪೋಕ್ಲು ರಸ್ತೆಗೆ ನೀರು ನುಗ್ಗಿದ್ದು, ನಾಪೋಕ್ಲು-ಭಾಗಮಂಡಲ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ.

ಕೊಡಗಿನಲ್ಲಿ ಮತ್ತೆ ಧಾರಾಕಾರ ಮಳೆ: ‘ರೆಡ್‌ ಅಲರ್ಟ್‌’ ಘೋಷಣೆ Read More »

ಹುಲಿ ಗಣತಿ: ಎರಡನೇ ಸ್ಥಾನಕ್ಕೆ ಕುಸಿದ ಕರ್ನಾಟಕ;- ಈ ರಾಜ್ಯಕ್ಕೆ ಮೊದಲ ಸ್ಥಾನ

ನವದೆಹಲಿ: ಇಂದು ವಿಶ್ವ ಹುಲಿ ದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2018ರ ಅಖಿಲ ಭಾರತ ಹುಲಿ ಅಂದಾಜು ವರದಿಯನ್ನು ಬಿಡುಗಡೆಗೊಳಿಸಿದ್ದಾರೆ. ದೇಶದಲ್ಲಿ 2967 ಹುಲಿಗಳು ಇರುವುದಾಗಿ 2018ರ ಹುಲಿ ಗಣತಿ ವರದಿಯಿಂದ ತಿಳಿದು ಬಂದಿದೆ. ಈ ಮೂಲಕ ಜಗತ್ತಿನಲ್ಲಿ ಹುಲಿ ಸಂತತಿಗೆ ಅತ್ಯಂತ ಸುರಕ್ಷಿತ ಸ್ಥಳವಾಗಿ ಭಾರತ ಗುರುತಿಸಿಕೊಂಡಿದೆ. ದೇಶದ ಹುಲಿಗಳ ಸಂಖ್ಯೆ 2014ರಲ್ಲಿ 1,400 ಇದ್ದದ್ದು 2019 ರಲ್ಲಿ 2,977 ಕ್ಕೆ ಏರಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಎರಡನೇ ಸ್ಥಾನಕ್ಕೆ ಕುಸಿದ ಕರ್ನಾಟಕ:

ಹುಲಿ ಗಣತಿ: ಎರಡನೇ ಸ್ಥಾನಕ್ಕೆ ಕುಸಿದ ಕರ್ನಾಟಕ;- ಈ ರಾಜ್ಯಕ್ಕೆ ಮೊದಲ ಸ್ಥಾನ Read More »

ವಿಶ್ವಾಸ ಮತ ಕಳೆದು ಕೊಂಡ ಮೈತ್ರಿ ಸರ್ಕಾರ: 14 ತಿಂಗಳ ಆಡಳಿತ ನೆಡೆಸಿದ ಸರ್ಕಾರ ಪತನ

ಬೆಂಗಳೂರು: 15 ದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕಕ್ಕೆ ತೆರೆ ಬಿದ್ದಿದ್ದು. ಕಾಂಗ್ರೆಸ್-ಜೆಡಿಎಸ್ ಮೈತ್ರಿಯ, ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ 14 ತಿಂಗಳ ಸರಕಾರ ಪತನಗೊಂಡಿದೆ. ಇಂದಿನ ವಿಶ್ವಾಸ ಮತಯಾಚನೆಯ ವೇಳೆ ಸರ್ಕಾರದ ಪರವಾಗಿ 99 ಮತಗಳು ಬಿದ್ದರೆ ವಿರುದ್ಧವಾಗಿ 105 ಮತಗಳು ಬಿದ್ದವು. ಈ ಮೂಲಕ ಸಿಎಂ ಸಲ್ಲಿಸಿದ್ದ ವಿಶ್ವಾಸ ಮತಯಾಚನೆ ಬಿದ್ದು ಹೋಗಿದೆ. ವಿಶ್ವಾಸ ಮತಯಾಚನೆಯ ವೇಳೆ ಒಟ್ಟು 20 ಶಾಸಕರು ಗೈರು ಹಾಜರಿ ಹಾಕಿದ್ದರು. ಕಾಂಗ್ರೆಸ್ಸಿನ 14, ಜೆಡಿಎಸ್‍ನ 3 ಶಾಸಕರು ಹಾಗೂ ಇಬ್ಬರು

ವಿಶ್ವಾಸ ಮತ ಕಳೆದು ಕೊಂಡ ಮೈತ್ರಿ ಸರ್ಕಾರ: 14 ತಿಂಗಳ ಆಡಳಿತ ನೆಡೆಸಿದ ಸರ್ಕಾರ ಪತನ Read More »

ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ನದಿಗಳಲ್ಲಿ ಹೆಚ್ಚಾದ ಹರಿವು

ಕೊಡಗು: ಕಾವೇರಿ ಜಲಾನಯನ ಪ್ರದೇಶ ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ, ಕಳೆದ ೨೪ ಗಂಟೆಗಳಲ್ಲಿ ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೊಡಗಿನ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನವರಿಯಿಂದ ಈವರೆಗೆ ಕೊಡಗಿನಲ್ಲಿ 542 ಮೀಲಿ ಮೀಟರ್ ಮಳೆಯಾಗಿದೆ. ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನ ಮಟ್ಟ ಹೆಚ್ಚುತ್ತಿದ್ದು ಭಕ್ತರಿಗೆ ಸಮಸ್ಯೆಯಾಗದಂತೆ ಕೊಡಗು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮತ್ತೆ ಜಲಪ್ರಳಯದ ಭೀತಿಯಲ್ಲಿ ಕೊಡಗು ಜನತೆ ಕಳೆದ ಬಾರಿ ಭೀಕರ ಮಳೆಗೆ ತುತ್ತಾಗಿದ್ದ ಕೊಡಗಿನಲ್ಲಿ

ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ನದಿಗಳಲ್ಲಿ ಹೆಚ್ಚಾದ ಹರಿವು Read More »

ಕೊಡಗಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೆಂಬಲ..!

ಕೊಡಗು: ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಮುಂದಿಟ್ಟುಕೊಂಡು ಕೊಡಗಿನಲ್ಲಿ ಟ್ವಿಟರ್‌ ಅಭಿಯಾನ ಆರಂಭವಾಗಿದೆ. ನಮ್ಮಲ್ಲಿ ಐಶಾರಾಮಿ ರೆಸಾರ್ಟ್, ಹೋಮ್ ಸ್ಟೇ ಇದೆ. ಆದ್ರೆ ಸುಸಜ್ಜಿತ ಆಸ್ಪತ್ರೆ ಇಲ್ಲ #WeNeedEmergencyHospitalInKodagu ಎಂದು ಅಭಿಯಾನ ಆರಂಭವಾಗಿದೆ. ಅಪಘಾತವಾದರೆ ತಕ್ಷಣ ಚಿಕಿತ್ಸೆ ಪಡೆಯಲು ಕೊಡಗಿನಲ್ಲಿ ಒಂದು ಉತ್ತಮ ಅಸ್ಪತ್ರೆಯಿಲ್ಲ. ಅದ್ದರಿಂದ ನಮಗೆ ಹೈಟೆಕ್ ಅಸ್ಪತ್ರೆ ಬೇಕೆಂದು ಸಂಸದ ಪ್ರತಾಪ್ ಸಿಂಹ, ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಬೇಡಿಕೆ ಇಡುತ್ತಿದ್ದಾರೆ. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವಲ್ಲಿ ನಮ್ಮ ಸರ್ಕಾರವು ಉತ್ಸುಕವಾಗಿದೆ.

ಕೊಡಗಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೆಂಬಲ..! Read More »

ಅಭಿಷೇಕಕ್ಕೂ ನೀರಿಲ್ಲ ಎಂದಿದ್ದ ಧರ್ಮಸ್ಥಳದಲ್ಲಿ ತುಂಬಿ ಹರಿಯುತ್ತಿದೆ ನೇತ್ರಾವತಿ ನದಿ

ಧರ್ಮಸ್ಥಳ: ಬರದಿಂದ ಕಂಗೆಟ್ಟಿದ್ದ ಕರಾವಳಿಯಲ್ಲಿ ಭಾಗಗಳಲ್ಲಿ ವಾಯು ಚಂಡಮಾರುತದ ಪರಿಣಾಮವಾಗಿ ಮಳೆಯ ಅಬ್ಬರ ಜೋರಾಗಿದ್ದು, ಬತ್ತಿ ಹೋಗಿದ್ದ ನೇತ್ರಾವತಿಗೆ ನೀರು ಬಂದಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನೇತ್ರಾವತಿ ನದಿಯಲ್ಲಿ ನೀರಿಲ್ಲ. ಮುಂದಿನ 15 ದಿನಗಳಲ್ಲಿ ಮಳೆ ಬರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿರುವುದಿಲ್ಲ ಎಂದಿದ್ದ ಧರ್ಮಸ್ಥಳದಲ್ಲೀಗ ನೇತ್ರಾವತಿ ಒಡಲು ತುಂಬಿ ಹರಿಯುತ್ತಿದ್ದು, ಸಮಸ್ಯೆ ಬಗೆಹರಿದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನೇತ್ರಾವತಿ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸ್ನಾನಘಟ್ಟದಲ್ಲಿ ನೀರು ಹರಿಯುತ್ತಿರುವುದು ಭಕ್ತರ ಸಂತಸಕ್ಕೆ ಕಾರಣವಾಗಿದೆ. ನೇತ್ರಾವತಿಯಲ್ಲಿ

ಅಭಿಷೇಕಕ್ಕೂ ನೀರಿಲ್ಲ ಎಂದಿದ್ದ ಧರ್ಮಸ್ಥಳದಲ್ಲಿ ತುಂಬಿ ಹರಿಯುತ್ತಿದೆ ನೇತ್ರಾವತಿ ನದಿ Read More »

ಕೊಡಗಿನಲ್ಲಿ ಗಾಳಿ ಮಳೆ: ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೋರಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ

ಮಡಿಕೇರಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಂಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ಆಗಿದೆ. ಕೊಡಗಿನಲ್ಲಿ ಸೋಮವಾರ ಇಡೀ ದಿನ ಜಡಿ ಮಳೆ ಸುರಿದಿದೆ. ಇನ್ನೆರಡು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಶೀತ ಗಾಳಿಯೂ ಬೀಸುತ್ತಿದೆ. ಮಳೆ ಆರಂಭಗೊಂಡ ಬೆನ್ನಲ್ಲೇ ಜನರು ಆತಂಕಗೊಂಡಿದ್ದಾರೆ. ಕಳೆದ ಬಾರಿ ಜಲ ಪ್ರಳಯಕ್ಕೆ ಜನರು ಬದುಕು ಮೂರಬಟ್ಟೆಯಾಗಿತ್ತು. ಭೂ ಕುಸಿತದಿಂದ ಅಪಾರ ಪ್ರಮಾಣದ ಆಸ್ತಿ ನಾಶವಾಗಿತ್ತು. ಇನ್ನೆರಡು ದಿನ ಜಿಲ್ಲೆಯಲ್ಲಿ

ಕೊಡಗಿನಲ್ಲಿ ಗಾಳಿ ಮಳೆ: ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೋರಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ Read More »

ಅರ್ಧ ಶತಮಾನದಿಂದ ಲಿಂಗನಮಕ್ಕಿಯಲ್ಲಿ ಮುಳುಗಿದ್ದರೂ ಸುಸ್ಥಿರವಾಗಿದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಿಸಿದ ಹಿರೇಭಾಸ್ಕರ ಆಣೆಕಟ್ಟು

ಅದು 1937-38ರ ಅವಧಿ. ಮಾದರಿ ಮೈಸೂರಿನ ನಿರ್ಮಾತೃ ನಾಲ್ವಡಿಯವರು ಮಹಾಮಾತ್ಯ ಮುತ್ಸದ್ದಿ ಮಿರ್ಜಾ ಇಸ್ಮಾಯಿಲ್ಲರ ದಿವಾನಗಿರಿಯಲ್ಲಿ ನಾಡು ಕಟ್ಟುವ ಕಾಯಕದಲ್ಲಿ ನಿರತರಾಗಿದ್ದ ಕಾಲ. ಶಿವನಸಮುದ್ರದ ವಿದ್ಯುತ್ ಸ್ಥಾವರದ ಎಲ್ಲ ವಿಸ್ತರಣೆ ಮುಗಿದು ಅದರ ಸಾಮರ್ಥ್ಯ 45 ಮೆಗಾವಾಟ್ಟಿಗೆ ಮುಟ್ಟುವ ಹಂತ. ಶಿಂಷಾದಲ್ಲಿ 17.2 ಮೆಗಾವಾಟ್ ಸಾಮರ್ಥ್ಯದ ಹೊಸ ವಿದ್ಯುದಾಗರ ಕಾರ್ಯಾರಂಭಕ್ಕೆ ಅಣಿಗೊಳ್ಳುತ್ತಿದ್ದ ಸಂದರ್ಭ. ಆದರೂ ಮೈಸೂರು ರಾಜ್ಯಕ್ಕೆ ವಿದ್ಯುತ್ ಕೊರತೆಯ ಭಯ. ಮಹಾರಾಜರು ನಿವೃತ್ತ ಮುಖ್ಯ ಇಂಜಿನಿಯರ್ ಎಸ್ ಕೆ ಶೇಷಾಚಾರ್ ನೇತೃತ್ವದಲ್ಲಿ ಪವರ್ ಕಮಿಟಿಯೊಂದನ್ನು ನೇಮಕ

ಅರ್ಧ ಶತಮಾನದಿಂದ ಲಿಂಗನಮಕ್ಕಿಯಲ್ಲಿ ಮುಳುಗಿದ್ದರೂ ಸುಸ್ಥಿರವಾಗಿದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಟ್ಟಿಸಿದ ಹಿರೇಭಾಸ್ಕರ ಆಣೆಕಟ್ಟು Read More »

2ನೇ ಅವಧಿಯ ಎನ್​ಡಿಎ ಸರ್ಕಾರದಲ್ಲಿ ರಾಜ್ಯದ ಯಾರಿಗೆಲ್ಲಾ ಮಂತ್ರಿ ಸ್ಥಾನ..? ಇಲ್ಲಿದೆ ಮಾಹಿತಿ..!

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್​ಡಿಎ ಸರ್ಕಾರದಲ್ಲಿ ರಾಜ್ಯದ ಮೂವರು ಸಂಸದರಿಗೆ ಸಚಿವ ಸ್ಥಾನ ದೊರೆತಿದೆ. ಬೆಂ.ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಬೆಳಗಾವಿ ಸಂಸದ ಸುರೇಶ್​​ ಅಂಗಡಿ ಹಾಗೂ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇನ್ನು ಕಳೆದ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಾರಿ ಕೂಡ ರಾಜ್ಯದಿಂದಲೇ ಮಂತ್ರಿ ಸ್ಥಾನ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇಂದು ಸಂಜೆ 5 ಗಂಟೆಗೆ ಮೋದಿ

2ನೇ ಅವಧಿಯ ಎನ್​ಡಿಎ ಸರ್ಕಾರದಲ್ಲಿ ರಾಜ್ಯದ ಯಾರಿಗೆಲ್ಲಾ ಮಂತ್ರಿ ಸ್ಥಾನ..? ಇಲ್ಲಿದೆ ಮಾಹಿತಿ..! Read More »

Scroll to Top