ಸಂಸದೆ ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್

ಮಂಡ್ಯ: ಮಂಡ್ಯದ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸ್ವತಃ ಸುಮಲತಾ ಅವರೇ ಖಚಿತಪಡಿಸಿದ್ದಾರೆ.

ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ…

Sumalatha Ambareesh ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಸೋಮವಾರ, ಜುಲೈ 6, 2020

Leave a Comment

Scroll to Top