ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ

ಮುಂಬೈ: ಬಾಲಿವುಡ್ನ ಖ್ಯಾತ ನಟ ಇರ್ಫಾನ್ ಖಾನ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಿನ್ನೆ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿದ್ದ ಇರ್ಫಾನ್ ಖಾನ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಳೆದ 2 ವರ್ಷಗಳಿಂದ ನ್ಯೂರೋ ಎಂಡೋಕ್ರೈನ್ ಟ್ಯೂಮರ್​ನಿಂದ ಬಳಲುತ್ತಿರುವ ಬಾಲಿವುಡ್ ಮತ್ತು ಹಾಲಿವುಡ್ ನಟ ಇರ್ಫಾನ್​ ಖಾನ್ ಚಿಕಿತ್ಸೆ ಪಡೆಯುತ್ತಲೇ ಇದ್ದರು. ಆದ್ರೆ ಇತ್ತೀಚೆಗೆ ಇದ್ದಕ್ಕಿದ್ದಂತೆ ಅವರ ಆರೋಗ್ಯ ಬಿಗಡಾಯಿಸಿದ್ದು, ಕೋಕಿಲಾಬೆನ್​ ಧಿರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದರು.

ಕಳೆದ ವಾರವಷ್ಟೇ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ ವಿಧಿವಶಾಗಿದ್ದರು. ಆದ್ರೆ ಮುಂಬೈನಲ್ಲಿದ್ದ ಇರ್ಫಾನ್ ಖಾನ್ ಲಾಕ್​ಡೌನ್​​ನಿಂದಾಗಿ ತಮ್ಮ ತಾಯಿಯ ಅಂತ್ಯಸಂಸ್ಕಾರಕ್ಕೂ ತೆರಳಲು ಸಾಧ್ಯವಾಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕವೇ ತಮ್ಮ ತಾಯಿಯ ಅಂತಿಮ ದರ್ಶನ ಪಡೆದಿದ್ದರು. 54 ವರ್ಷದ ಇರ್ಫಾನ್​ ಖಾನ್​​, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Scroll to Top