ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಬೆಳ್ಳಂಬೆಳಿಗ್ಗೆ ಐಟಿ ಇಲಾಖೆ ಶಾಕ್ ನೀಡಿದೆ. ಕನ್ನಡದ ಸ್ಟಾರ್ ನಟರು ಸೇರಿದಂತೆ ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಟ ರಾಕಿಂಗ್ ಸ್ಟಾರ್ ಯಶ್, ಪವರ್ ಸ್ಟಾರ್ ಪುನೀತ್ರಾಜ್‍ಕುಮಾರ್, ಶಿವರಾಜ್‍ಕುಮಾರ್, ಕಿಚ್ಚಾ ಸುದೀಪ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸ, ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸ, ಮಹಾಲಕ್ಷ್ಮಿ ಲೇಔಟ್‌ನ ನಾಗಪುರದ ರಾಕ್ ಲೈನ್ ವೆಂಕಟೇಶ್ ನಿವಾಸ, ನಾಗರಬಾವಿಯ ವಿಜಯ್ ಕಿರಗಂದೂರು ನಿವಾಸ ಹಾಗೂ ಎಚ್ಎಸ್ಆರ್ ಲೇಔಟ್ ನಲ್ಲಿರುವ ಮನೋಹರ್ ನಿವಾಸದ ಮೇಲೆ ದಾಳಿ ನಡೆದಿದ್ದು ಐಟಿ ಅಧಿಕಾರಿಗಳು ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು ಇನ್ನಷ್ಟು ನಟರ ಮನೆ ಮೇಲು ದಾಳಿ ನಡೆದಿರುವ ಸಾಧ್ಯತೆಗಳಿವೆ