ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡಕ್ಕೆ 11 ರಾಷ್ಟ್ರ ಪ್ರಶಸ್ತಿ

ನವದೆಹಲಿ: 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿದ್ದು ಕನ್ನಡದ ನಾತಿಚರಾಮಿ ಚಿತ್ರ ಅತ್ಯುತ್ತಮ ಸೇರಿದಂತೆ 11 ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ ಪ್ರಶಸ್ತಿ ಬಾಚಿಕೊಂಡಿದೆ.

ಈ ಬಾರಿ ಒಟ್ಟು ಒಟ್ಟು 31 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಕನ್ನಡಕ್ಕೆ ಈ ಸಲ ಹಲವಾರು ಪ್ರಶಸ್ತಿಗಳು ಸಿಕ್ಕಿವೆ. ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಆಗಿ ಶ್ರುತಿ ಹರಿಹರನ್ ಅಭಿನಯದ ನಾಚಿಚರಾಮಿ ಹಾಗೂ ಅತ್ಯುತ್ತಮ ಆ್ಯಕ್ಷನ್ ಚಿತ್ರವಾಗಿ ಕೆಜಿಎಫ್ ಆಯ್ಕೆಯಾಗಿದೆ. ನಾತಿಚರಾಮಿಯ ಮಾಯಾವಿ ಮನವೆ ಗೀತೆಗೆ ಅತ್ಯುತ್ತಮ ಸಾಹಿತ್ಯ ಪ್ರಶಸ್ತಿಗೆ ಪಾತ್ರವಾಗಿದೆ.

ಪ್ರಶಸ್ತಿ ಪಟ್ಟಿ:

 • ಅತ್ಯುತ್ತಮ ಪ್ರಾದೇಶಿಕ ಚಿತ್ರ – ನಾತಿಚರಾಮಿ
 • ಅತ್ಯುತ್ತಮ ಮಹಿಳಾ ಗಾಯಕಿ (ಮಾಯಾವಿ ಮಾನವೆ ಹಾಡು) (ಬಿಂಧು ಮಾಲಿನಿ ಗಾಯಕಿ) – ನಾತಿಚರಾಮಿ
 • ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ – ನಾತಿಚರಾಮಿ
 • ಅತ್ಯುತ್ತಮ ಸಂಕಲನ – ನಾತಿಚರಾಮಿ
 • ನಾತಿಚರಾಮಿ ಚಿತ್ರದ ಅಭಿನಯಕ್ಕಾಗಿ ನಟಿ ಶೃತಿ ಹರಿಹರನ್ ಗೆ ವಿಶೇಷ ಪ್ರಶಸ್ತಿ
 • ಅತ್ಯುತ್ತಮ ಸಾಹಸ ಚಿತ್ರ – ಕೆಜಿಎಫ್
 • ಅತ್ಯುತ್ತಮ ವಿಎಫ್ ಎಕ್ಸ್ ಚಿತ್ರ – ಕೆಜಿಎಫ್
 • ಅತ್ಯುತ್ತಮ ರಾಷ್ಟ್ರೀಯ ಏಕತಾ ಚಿತ್ರ – ಒಂದಲ್ಲ, ಎರಡಲ್ಲ
 • ಅತ್ಯುತ್ತಮ ಬಾಲ ಕಲಾವಿದ – ಒಂದಲ್ಲ, ಎರಡಲ್ಲ
 • ಅತ್ಯುತ್ತಮ ಮಕ್ಕಳ ಚಿತ್ರ – ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೂಡು
 • ಅತ್ಯುತ್ತಮ ರಾಷ್ಟ್ರೀಯ ಆಕ್ರ್ಸೂಸ್ ಚಿತ್ರ – ಮೂಕಜ್ಜಿಯ ಕನಸುಗಳು
Scroll to Top