
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 20 ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಗೋರಿಪೋರ ಪ್ರದೇಶದಲ್ಲಿ ಉಗ್ರರು ಸುಧಾರಿತ ಸ್ಫೋಟಕ ಬಳಸಿ ಸಿಆರ್‌ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಬಳಿಕ ಸ್ಥಳದಲ್ಲಿ ಗುಂಡಿನ ದಾಳಿ ಕೂಡ ನಡೆದಿದೆ.

ಶ್ರೀನಗರ – ಜಮ್ಮು ಹೆದ್ದಾರಿಯಲ್ಲಿ ನಿಂತಿದ್ದ ಆಟೋರಿಕ್ಷಾಕ್ಕೆ ಸುಧಾರಿತ ಸ್ಫೋಟಕ ಅಳವಡಿಸಿ, ಸಿಆರ್‌ಪಿಎಫ್ ಯೋಧರಿದ್ದ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಭದ್ರತಾಪಡೆಗಳು ಸದ್ಯ ಉಗ್ರರಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.
You must be logged in to post a comment.