
ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆಯಂದು ‘ವೀರ ಚಕ್ರ’ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಕಳೆದ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ಬಳಿಕ ಭಾರತದ ವಾಯುಗಡಿ ಉಲ್ಲಂಘಿಸಿ ನುಗ್ಗಲು ಯತ್ನಿಸಿದ್ದ ಪಾಕ್ ಯುದ್ಧ ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ಹೊಡೆದುರುಳಿಸಿದ್ದರು. ಈ ವೇಳೆ ಪಾಕ್ ವಿಮಾನ ಬೆನ್ನತ್ತಿ ಹೋದ ಅವರನ್ನು ಪಾಕಿಸ್ತಾನ ಸೇನೆ ಸೆರೆ ಹಿಡಿದಿತ್ತು. ಎರಡು ದಿನಗಳ ಬಳಿಕ ಅವರು ಬಿಡುಗಡೆಯಾಗಿದ್ದರು. ಇವರ ಸಾಹಸಕ್ಕೆ ಮೆಚ್ಚಿ ಕೇಂದ್ರ ಸರ್ಕಾರ ಸ್ವಾತಂತ್ರ್ಯ ದಿನಚಾರಣೆಯ ಸಂದರ್ಭದಲ್ಲಿ ಸೇನಾಪಡೆಯ ಅತ್ಯುನ್ನತ ಗೌರವ ವೀರ್ ಚಕ್ರ ಪುರಸ್ಕಾರ ನೀಡಲು ನಿರ್ಧಾರ ಕೈಗೊಂಡಿದೆ.
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಭಿನಂದನ್ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
You must be logged in to post a comment.