ನವದೆಹಲಿ: ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡೀಸ್ ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.
ಫರ್ನಾಂಡೀಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಕೋಮಾದಲ್ಲಿದ್ದ ಫರ್ನಾಂಡಿಸ್ ಅವರು ಮರೆಗುಳಿ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ 7 ಗಂಟೆಗೆ ದೆಹಲಿಯಲ್ಲಿ ಕೊನೆಯುಸಿರೆಳೆದರು.
ಪ್ರಸಿದ್ಧ ಕಾರ್ಮಿಕ ಹೋರಾಟಗಾರ, ಮಾನವ ಹಕ್ಕುಗಳ ಹೋರಾಟಗಾರ, ಪತ್ರಕರ್ತ, ಸಮಾಜವಾದಿ, ರಾಜಕಾರಣಿ, ಕ್ರಿಯಾಶೀಲ ವ್ಯಕ್ತಿಯಾಗಿದ್ದ ಜಾರ್ಜ್ ಫರ್ನಾಂಡೀಸ್ ಅವರು ಜೂನ್ 3, 1930ರಂದು ಮಂಗಳೂರಿನಲ್ಲಿ ಜನಿಸಿದರು.