ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆ ಮಾರ್ಚ್ 31ರ ಮಧ್ಯ ರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ಪ್ಯಾಸೆಂಜರ್ ರೈಲು ಸಂಚಾರ ಸ್ಥಗಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
ಭಾನುವಾರ ಈ ಕುರಿತು ರೈಲ್ವೆ ಅಧಿಕೃತ ಆದೇಶ ಹೊರಡಿಸಿದೆ. ರೈಲ್ವೆಯಲ್ಲಿ ಪ್ರಯಾಣ ಮಾಡಿದ 12 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ಖಚಿತವಾಗಿತ್ತು. ‘ಜನತಾ ಕರ್ಫ್ಯೂ’ಗೆ ಬೆಂಬಲ ನೀಡಿ ಭಾನುವಾರ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ.
ದೇಶದಲ್ಲಿ ಇದೇ ಮೊದಲ ಬಾರಿಗೆ ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಗೂಡ್ಸ್ ರೈಲುಗಳು ಎಂದಿನಂತೆ ಸಂಚಾರ ನಡೆಸಲಿವೆ ಎಂದು ರೈಲ್ವೆ ಇಲಾಖೆ ಆದೇಶದಲ್ಲಿ ತಿಳಿಸಿದೆ. ಆದರೆ, ರೈಲ್ವೆ ಸಿಬ್ಬಂದಿಗೆ ರಜೆ ನೀಡಲಾಗಿಲ್ಲ.