ನವದೆಹಲಿ: ನಾಗಾಲೋಟದಿಂದ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಸೋಮವಾರ ಕೊಂಚ ಇಳಿಕೆ ಆಗಿದೆ. ಅಲ್ಲದೇ ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾದವರ ಸಂಖ್ಯೆ ಹೆಚ್ಚಳಗೊಂಡಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 60,975 ಜನರಿಗೆ ಹೊಸದಾಗಿ ಸೋಂಕು ತಗುಲಿದ್ದು ಒಟ್ಟು ಸೋಂಕಿತರ ಸಂಖ್ಯೆ 31.67 ಲಕ್ಷಕ್ಕೆ ಏರಿಕೆ ಆಗಿದೆ. ಇನ್ನು 848 ಸೋಂಕಿತರು ಮೃತಪಟ್ಟಿದ್ದು ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 58,390 ಆಗಿದೆ.
ಅಲ್ಲದೆ ಕಳೆದ 24 ಗಂಟೆಗಳಲ್ಲಿ ದಾಖಲೆಯ 66,000+ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲಿ ದೃಢಪಟ್ಟ ಪ್ರಕರಣಗಳಿಗಿಂತ ಹೆಚ್ಚು ಜನ ಗುಣಮುಖರಾಗಿದ್ದಾರೆ. ಸದ್ಯ ಗುಣಮುಖರಾದವರ ಸಂಖ್ಯೆ 24.04 ಲಕ್ಷ ದಾಟಿದ್ದು, 7.04 ಲಕ್ಷ ಸೋಂಕಿತರು ಇನ್ನೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.
- ಗುಣಮುಖ ಪ್ರಮಾಣ – 75.92%
- ಸಾವಿನ ಪ್ರಮಾಣ – 1.84%
- ಆಗಸ್ಟ್ 24ರಂದು 9.25 ಲಕ್ಷ ಸ್ಯಾಂಪಲ್ ಪರೀಕ್ಷೆ
- ಇದುವರೆಗೆ 3.68 ಕೋಟಿ ಸ್ಯಾಂಪಲ್ ಪರೀಕ್ಷೆ