ಹೇಗ್: ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ವಿಧಿಸಿರುವ ಗಲ್ಲು ಶಿಕ್ಷೆಗೆ ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಬುಧವಾರ ಸಂಜೆ ತಡೆ ನೀಡಿದೆ.
ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ನಡೆಸಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಜು.17 ರಂದು ಐಸಿಜೆ ಮಹತ್ವದ ಮಧ್ಯಂತರ ಆದೇಶ ನೀಡಿದ್ದು, ಪಾಕಿಸ್ತಾನದಲ್ಲಿರುವ ಕುಲಭೂಷಣ್ ಜಾಧವ್ ಗೆ ರಾಜತಾಂತ್ರಿಕ ನೆರವು ಪಡೆಯುವುದಕ್ಕೆ ಅನುಮತಿ ನೀಡಿದೆ. ಐಸಿಜೆಯ ಈ ತೀರ್ಪು ಪಾಕ್ ವಿರುದ್ಧ ಭಾರತಕ್ಕೆ ಮಹತ್ವದ ಗೆಲುವು ಎಂದು ವಿಶ್ಲೇಷಿಸಲಾಗುತ್ತಿದೆ.
ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿಗೆ ಕುಲಭೂಷಣ್ ಜಾಧವ್ ಭೇಟಿಗೆ ಅವಕಾಶ ನೀಡಬೇಕು ಎಂದು ಐಸಿಜೆ ತೀರ್ಪು ನೀಡಿದೆ. ಅಲ್ಲದೇ ಪ್ರಕರಣದ ಸಂಪೂರ್ಣ ಮರುವಿಚಾರಣೆ ನಡೆಸಬೇಕೆಂದು ಐಸಿಜೆ ಪಾಕಿಸ್ತಾನಕ್ಕೆ ಸೂಚಿಸಿದೆ.