
ನವದೆಹಲಿ: ವಿಶ್ವದ ಅತಿದೊಡ್ಡ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದ್ದಾರೆ.
ಇಂದು ಬೆಳಿಗ್ಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಅವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದು ದೇಶದ ಜನತೆ ಕಾಯುತ್ತಿದ್ದ ಆ ಕ್ಷಣ ಇದೀಗ ಬಂದಿದೆ ಎಂದು ಹೇಳಿದ್ದಾರೆ. ಎರಡನೇ ಹಂತದಲ್ಲಿ ವೃದ್ಧರು, ಕಾಯಿಲೆ ಇರುವವರು ಒಳಗೊಂಡಂತೆ ಒಟ್ಟು 20 ಕೋಟಿ ಜನರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಈ ವೇಳೆ ತಿಳಿಸಿದರು.
ದೇಶಾದ್ಯಂತ ತೆರೆಯಲಾಗಿರುವ 3 ಸಾವಿರಕ್ಕೂ ಅಧಿಕ ಕೇಂದ್ರಗಳಲ್ಲಿ ಆದ್ಯತಾ ಪಟ್ಟಿಯಲ್ಲಿರುವವರಿಗೆ ಲಸಿಕೆ ನೀಡಲಾಗುತ್ತದೆ. ಪ್ರತಿ ಕೇಂದ್ರದಲ್ಲಿ ಗರಿಷ್ಠ 100 ಮಂದಿಗೆ ಲಸಿಕೆ ವಿತರಣೆ ಮಾಡಲಾಗುತ್ತದೆ. ರಾಜ್ಯದಲ್ಲಿ 7 ಲಕ್ಷಕ್ಕೂ ಅಧಿಕ ಆರೋಗ್ಯ ಕಾರ್ಯಕರ್ತರು ಮೊದಲ ಹಂತದಲ್ಲಿ ಲಸಿಕೆ ಪಡೆಯಲಿದ್ದಾರೆ.
#WATCH live: PM Modi launches nation-wide COVID-19 vaccination drive via video conference. https://t.co/ZS0oJofkVl
— ANI (@ANI) January 16, 2021
You must be logged in to post a comment.