ಚೆನ್ನೈ: ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಎಂಜಿಎಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜಿಎಂ ಆಸ್ಪತ್ರೆಯ ಆಸ್ಪತ್ರೆಯ ಹೆಲ್ತ್ ಬುಲೆಟಿನ್ನಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ.
ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ವೆಂಟಿಲೇಟರ್ ಸಪೋರ್ಟ್ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಅವರ ಈಗಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ನಮ್ಮ ಕ್ಲಿನಿಕಲ್ ಟೀಮ್ನಿಂದ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.
ಈ ಬಗ್ಗೆ ಎಸ್.ಪಿ.ಬಿ ಅವರ ಪುತ್ರ ಚರಣ್ ಸಹ ಮಾಹಿತಿ ನೀಡಿದ್ದಾರೆ. ಆವರಿಗೆ ಎಕ್ಮೊ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.ಅವರ ಆರೋಗ್ಯವನ್ನು ಕಾಲಕಾಲಕ್ಕೆ ಮೇಲ್ವಿಚಾರಣೆ ಮಾಡಲಾಗುತ್ತಿದೆ. ನನ್ನ ತಂದೆಯನ್ನು ನೋಡಲು ಆಸ್ಪತ್ರೆಗೆ ಹೋಗಿದ್ದೆ. ಅವರು ನಿನ್ನೆಗಿಂತ ಇಂದು ಹೆಚ್ಚು ಚುರುಕಾಗಿದ್ದರು. ಅವರು ನನಗೆ ಏನೋ ಹೇಳಲು, ಏನಾದರೂ ಬರೆಯಲು ಪ್ರಯತ್ನಿಸಿದರು. ಆದರೆ ಪೆನ್ನನ್ನು ಸರಿಯಾಗಿ ಹಿಡಿದುಕೊಳ್ಳಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಅವರು ಬರೆಯಲು ಮತ್ತು ಮಾತನಾಡುತ್ತಾರೆಂದು ವಿಶ್ವಾಸವಿದೆ.’ಅಪ್ಪ ಹಾಡುಗಳನ್ನು ಕೇಳುತ್ತಿದ್ದಾರೆ. ಅವರು ಹಾಡಲು ಸಹ ಪ್ರಯತ್ನಿಸುತ್ತಿದ್ದಾರೆ. ಅವರು ಹೇಗೆ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇದು ಒಂದು ಒಳ್ಳೆಯ ಉದಾಹರಣೆಯಾಗಿದೆ ಎಂದು ತಿಳಿಸಿದ್ದಾರೆ.