ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದಿಂದ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರವು ಹೆಚ್ಚಿನ ಮಳೆ ಬೀಳುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಸೂಚನೆ ನೀಡಿದೆ. ಸಾರ್ವಜನಿಕರು ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.