ಬೆಂಗಳೂರು: ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ಗೆ ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಮಲ್ಲೇಪುರಂ ಜಿ.ವೆಂಕಟೇಶ್ ನೇತೃತ್ವದ ಆಯ್ಕೆ ಸಮಿತಿಯು ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು 5 ಲಕ್ಷ ರೂ. ನಗದು, ಫಲಕವನ್ನು ಒಳಗೊಂಡಿದೆ. ಫೆ.8ರಂದು ಬನವಾಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.