ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಿಢೀರ್ ರಾಜಿನಾಮೆ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿ ಹೆಸರಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಬೆನ್ನಲೆ ಪತ್ರ ಬರೆದಿರುವ ಅವರು, ‘ನನ್ನ ರಾಜೀನಾಮೆ ವೈಯಕ್ತಿಕ ನಿರ್ಧಾರ. ಇದಕ್ಕೆ ನೇರವಾಗಿ ಯಾರೊಬ್ಬರೂ ಕಾರಣವಲ್ಲ. ಇಷ್ಟು ದಿನ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದೆ. ಈ ಹಂತದಲ್ಲಿ ಹುದ್ದೆ ತೊರೆದು ಹೋಗುತ್ತಿರುವುದಕ್ಕೆ ಜನರ ಕ್ಷಮೆ ಯಾಚಿಸುತ್ತೇನೆ’.

“ಪ್ರಜಾಪ್ರಭುತ್ವದ ಮೂಲ ಆಧಾರ ಸ್ತಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿವೆ. ದೇಶದ ಬಹುತ್ವದ ಎಳೆಗಳಿಗೆ ಭವಿಷ್ಯದಲ್ಲಿ ಹೆಚ್ಚು ಅಪಾಯ ಇದ್ದಂತೆ ಭಾಸವಾಗುತ್ತಿದೆ. ಭವಿಷ್ಯದ ದಿನಗಳಲ್ಲಿ ಅಧಿಕಾರಿಗಳಿಗೆ ದೊಡ್ಡ ಪ್ರಮಾಣದ ಸವಾಲುಗಳು ಎದುರಾಗಬಹುದು. ಈ ಹಂತದಲ್ಲಿ ಭಾರತೀಯ ಆಡಳಿತ ಸೇವೆಯಿಂದ (ಐಎಎಸ್‌) ಹೊರಗಿರುವುದೇ ಲೇಸು ಎನಿಸುತ್ತದೆ. ಸೇವೆಯಿಂದ ಹೊರಗಿದ್ದು ಎಲ್ಲ ಜನರ ಒಳಿತಿಗಾಗಿ ದುಡಿಯುತ್ತೇನೆ’ ಎಂದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಮಿಳುನಾಡಿನವರಾದ ಸಸಿಕಾಂತ್ ಸೆಂಥಿಲ್ 2009ರ ವೃಂದದ ಐಎಎಸ್‌ ಅಧಿಕಾರಿಯಾಗಿದ್ದು, 2017ರ ಅಕ್ಟೋಬರ್ 10ರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದಾರೆ.

Leave a Comment

Scroll to Top