
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್’ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಿ, ಅಕ್ಟೋಬರ್ ನಲ್ಲಿ ನೇರ ತರಗತಿಗಳನ್ನು ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿರುವ ಅವರು ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ.
ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲವು ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವೂ ಮುಂದಿನ ತಿಂಗಳಿಂದ ಅನ್ ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ.
ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ.
ಯಾವುದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂಬ ಕಾರಣಕ್ಕೆ ಶೈಕ್ಷಣಿಕ ವರ್ಷದ ಆರಂಭದ ಜತೆಯಲ್ಲಿಯೇ ಅಂತಿಮ ವರ್ಷದಲ್ಲಿರುವ ಎಲ್ಲ ಪದವಿ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜತೆಗೆ, ಬ್ಯಾಕ್ ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
📢
— Dr. Ashwathnarayan C. N. (@drashwathcn) August 26, 2020
ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ. @CMofKarnataka @KarnatakaVarthe
1/4
You must be logged in to post a comment.