ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಮತ್ತೆ ಭಾರಿ ಮಳೆ ಸುರಿಯುತ್ತಿದ್ದು ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ಮತ್ತಷ್ಟು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಮಾನ ಇಲಾಖೆನೀಡಿದ್ದು, ಇದರ ಬೆನ್ನಲೆ ಕೊಡಗು ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರ ‘ರೆಡ್‌ ಅಲರ್ಟ್‌’ ಘೋಷಿಸಿದೆ.

ಬೆಳಗ್ಗೆಯಿಂದ ಬಿಟ್ಟು ಬಿಡದೆ ಕೊಡಗಿನ ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಪರಿಣಾಮ ಮತ್ತೆ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಮಳೆಯಿಂದ ನಾಪೋಕ್ಲು ಭಾಗಮಂಡಲ ಮತ್ತು ಮಡಿಕೇರಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ರಸ್ತೆ ಮೇಲೆ 2 ಅಡಿ ನೀರು ಹರಿಯುತ್ತಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಯವ್ಯಸ್ತಗೊಂಡಿದೆ.

ಧಾರಾಕಾರ ಮಳೆ ಹಿನ್ನಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

Scroll to Top