ಸಾಹಿತ್ಯ ಲೋಕದ ದಿಗ್ಗಜ ಚಿದಾನಂದ ಮೂರ್ತಿ ಇನ್ನಿಲ್ಲ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಸಂಶೋಧಕ, ಪ್ರೋಫೆಸರ್​ ಚಿದಾನಂದ ಮೂರ್ತಿಯವರು ಇಹಲೋಕ ತ್ಯಜಿಸಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇವತ್ತು ಬೆಳಗಿನ ಜಾವ 3.30 ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ವಿಜಯನಗರ ಸಮೀಪ ಹಂಪಿ ನಗರದ ಮೂರನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ಬೆಳಗ್ಗೆ 9ಗಂಟೆ ನಂತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಿದಾನಂದಮೂರ್ತಿಯವರ ಆಸೆಯಂತೆ ಅವರ ದೇಹವನ್ನು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು. ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ಪ್ರಜಾವಾಣಿಗೆ ತಿಳಿಸಿವೆ.

ಕನ್ನಡ ಭಾಷಾಶಾಸ್ತ್ರ, ವಚನ ಸಾಹಿತ್ಯ ಸಂಶೋಧನೆ ಮತ್ತು ಶಾಸನ ಶಾಸ್ತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಚಿದಾನಂದಮೂರ್ತಿ ಅವರು ವಿಜಯನಗರ ಸಾಮ್ರಾಜ್ಯ, ಹಂಪಿ ಪರಿಸರದ ಬಗ್ಗೆಯೂ ಸಂಶೋಧನೆಗಳನ್ನು ಮಾಡಿದ್ದರು.

Leave a Comment

Scroll to Top