ಕೊಡಗು: ಕನ್ನಡ ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ತಲಕಾವೇರಿಯ ಪವಿತ್ರ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಪ್ರತ್ಯಕ್ಷವಾಗುತ್ತಾಳೆ.
ಇಂದು ತಡರಾತ್ರಿ(ಅ.18) 12:59ಕ್ಕೆ ತೀರ್ಥೋದ್ಭವ ಆಗಲಿದ್ದು, ಬ್ರಹ್ಮಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿ ಹರಿಯಲಿದೆ. ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈ ವಿಸ್ಮಯ ನೋಡಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.
ಇಂದು ಸಂಜೆ ಮಹಾಮಂಗಳಾರತಿ ನಂತರ ಭಕ್ತರಿಗೆ ಕ್ಷೇತ್ರಕ್ಕೆ ಪ್ರವೇಶ ಸಿಗಲಿದೆ. ನಾನಾ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಅರ್ಚಕರ ತಂಡ ಕೂಡ ಕಾವೇರಿ ಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ. ಮಂಡ್ಯ, ಮೈಸೂರು, ಹಾಸನ ಸೇರಿ ರಾಜ್ಯ, ದೇಶದ ನಾನಾ ಕಡೆಗಳಿಂದ ಭಕ್ತರು ಆಗಮಿಸಲಿದ್ದು, ಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದ ನಂತರ ಕಾವೇರಿ ಮಾತೆಯ ದರ್ಶನ ಪಡೆಯಲಿದ್ದಾರೆ.