ಮೈಸೂರು: ಕರ್ನಾಟಕದಲ್ಲಿ ಏಪ್ರಿಲ್ 30ರವರೆಗೆ ಕೊರೊನಾ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ದೇಶಾದ್ಯಂತ ಹೇರಲಾಗಿರುವ 21 ದಿನಗಳ ಲಾಕ್‍ಡೌನ್ ಏ.14ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಸತತ ಮೂರ್ನಾಲ್ಕು ಗಂಟೆಗಳ ಕಾಲ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ನಮ್ಮ ನಿರ್ಧಾರವೂ ಇದೇ ಆಗಿತ್ತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ದೇಶಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಲಾಕ್‌ಡೌನ್ ಸಡಿಲಗೊಳಿಸಬಾರದು, 15ದಿನ ಲಾಕ್‌ಡೌನ್ ಅನಿವಾರ್ಯ ಒಂದೆರೆಡು ದಿನಗಳಲ್ಲಿ ಮಾರ್ಗಸೂಚಿಗಳನ್ನು ತಿಳಿಸುವುದಾಗಿ ಮೋದಿ ಹೇಳಿರುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.