ರಾಜ್ಯದ ವಿವಿಧೆಡೆ ಭಾರೀ ಮಳೆ ನಿರೀಕ್ಷೆ: ಮುಂದಿನ 5 ದಿನಗಳ ಜಿಲ್ಲಾವಾರು ಮಳೆ ಮುನ್ಸೂಚನೆ ‌ಮಾಹಿತಿ

ಮೈಸೂರು: ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಮಂಡ್ಯ ಹಾಗೂ ಚಾಮರಾಜನಗರದಲ್ಲಿ ಉತ್ತಮ ಮಳೆ ಸಾಧ್ಯತೆ ಇದೆ.

ಅಲ್ಪ ದಿನಗಳ ಬಿಡುವು ನೀಡಿದ್ದ ವರುಣ ದೇವ ಮತ್ತೆ ಆರ್ಭಟ ಶುರು ಮಾಡಲಿದ್ದಾನೆ. ಜೂನ್​-ಜುಲೈನಲ್ಲಿ ಕೊಂಚ ತಗ್ಗಿದ್ದ ಮಳೆ ಆಗಸ್ಟ್​ನಲ್ಲಿ ಉತ್ತಮವಾಗಿ ಸುರಿದಿತ್ತು. ಈಗ ಸೆಪ್ಟೆಂಬರ್​ ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದು, ಮುಂದಿನ 5 ದಿನಗಳಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರಗೆ ಭಾರೀ ಮಳೆ ನಿರೀಕ್ಷೆ ಇದ್ದು ಆರೆಂಜ್​ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 3 ದಿನ ಹೆಚ್ಚಿನ ಮಳೆ ನಿರೀಕ್ಷೆ ಇದ್ದು ಎಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಮುಂದಿನ ದಿನಗಳಲ್ಲಿ ಏರಿಕೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 5ರವರಗೆ ವ್ಯಾಪಕ ಮಳೆಯಾಗಲಿದೆ. ಮುಂದಿನ ಎರಡು ದಿನಗಳವರಗೆ ಬೆಂಗಳೂರಿನಲ್ಲೂ ಮಳೆ ಆಗುವ ಸಾಧ್ಯತೆ ಇದೆ.

Leave a Comment

Scroll to Top