ಕೊಡಗಿನಲ್ಲಿ ಗಾಳಿ ಮಳೆ: ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೋರಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ

ಮಡಿಕೇರಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಂಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ಆಗಿದೆ. ಕೊಡಗಿನಲ್ಲಿ ಸೋಮವಾರ ಇಡೀ ದಿನ ಜಡಿ ಮಳೆ ಸುರಿದಿದೆ.

ಇನ್ನೆರಡು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಶೀತ ಗಾಳಿಯೂ ಬೀಸುತ್ತಿದೆ.

ಮಳೆ ಆರಂಭಗೊಂಡ ಬೆನ್ನಲ್ಲೇ ಜನರು ಆತಂಕಗೊಂಡಿದ್ದಾರೆ. ಕಳೆದ ಬಾರಿ ಜಲ ಪ್ರಳಯಕ್ಕೆ ಜನರು ಬದುಕು ಮೂರಬಟ್ಟೆಯಾಗಿತ್ತು. ಭೂ ಕುಸಿತದಿಂದ ಅಪಾರ ಪ್ರಮಾಣದ ಆಸ್ತಿ ನಾಶವಾಗಿತ್ತು. ಇನ್ನೆರಡು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೊಡಗು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಅಲ್ಲದೆ ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದಾಗಿ ಕೋರಿದೆ.

Scroll to Top