ಚಾಮರಾಜನಗರ: ಡಿಸ್ಕವರಿ ಚಾನೆಲ್ನ ಜನಪ್ರಿಯ ಟಿವಿ ಶೋ ಮ್ಯಾನ್ ವರ್ಸರ್ಸ್ ವೈಲ್ಡ್ನಲ್ಲಿ ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಕಾಣಿಸಿಕೊಳ್ಳಲಿದ್ದಾರೆ.
ಈಗಾಗಲೇ ತಲೈವಾ ರಜಿನಿಕಾಂತ್ ಬಂಡೀಪುರದ ಖಾಸಗಿ ರೆಸಾರ್ಟ್ನಲ್ಲಿ ತಂಗಿದ್ದು, ಬೇರ್ ಗ್ರಿಲ್ಸ್ ಕೂಡಾ ರೆಸಾರ್ಟ್ಗೆ ತೆರಳಿದ್ದಾರೆ. ಇನ್ನು ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ಬಾಲಿವುಡ್’ನ ಆಕ್ಷನ್ ಹೀರೋ ಅಕ್ಷಯ್ ಕುಮಾರ್ ಕೂಡ ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಹರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಆಕ್ಷಯ್ ಕುಮಾರ್ ಆಗಮಿಸಬೇಕಾಗಿದೆ.
ಇತ್ತೀಚಿಗೆ ಮಾನವ ಅಭಿವೃದ್ದಿಯಿಂದಾಗಿ ಕಾಡು ಪ್ರಾಣಿಗಳ ಸಂತತಿ ಅಪಾಯದ ನಷ್ಟದಲ್ಲಿದೆ. ಹೀಗಾಗಿ ಈ ಬಗ್ಗೆ ಜಾಗೃತಿ ಮೂಡಿಸಲು ಮಾನವ-ವನ್ಯಜೀವಿ ಸಂಘರ್ಷ ಸಾಕ್ಷ್ಯಚಿತ್ರದಲ್ಲಿ ಅಭಿನಯಿಸಲು ಈ ಸ್ಟಾರ್‌ಗಳು ಆಗಮಿಸಿದ್ದಾರೆ ಎಂದು ಹೇಳಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 3 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಈಗಾಗಲೇ ಅನುಮತಿ ಪಡೆದಿದ್ದಾರೆ. ಈ ಹಿಂದೆ ಗ್ರಿಲ್ಸ್ ಅವರೊಂದಿಗೆ ಪ್ರಧಾನಿ ಮೋದಿ ಕಾಡು ಸುತ್ತಿದ್ದರು. ಈಗ ರಜಿನಿ ಸುತ್ತಾಡಿ ಪರಿಸರ ಜಾಗೃತಿ ಮೂಡಿಸಲಿದ್ದಾರೆ. ಚಿತ್ರೀಕರಣದ ಸ್ಥಳದ ಬಗ್ಗೆ ಇನ್ನೂ ತಿಳಿದುಬಂದಿಲ್ಲ.