ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಯನ್ನ ಮುಂದೂಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊರೋನಾ ತಡೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಂಡಿದೆ. ಈ ನಿಒಟ್ಟಿನಲ್ಲಿ SSLC ಪರೀಕ್ಷೆ ಕೂಡ ಮೂಂದೂಡಿಕೆಯಾಗಿದೆ.
ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.