
ಬೆಂಗಳೂರು: ಕೊರೊನಾ ವೈರಸ್ ಬಗ್ಗೆ ಸಾಮಾಜಿಕ ಕಾಳಜಿಯನ್ನು ಹೊಂದಿರುವ ಸುಧಾಮೂರ್ತಿಯವರು ಮತ್ತೇ ತಮ್ಮ ಕೈಲಾದ ಸಹಾಯವನ್ನು ಮಾಡಲು ಮುಂದೆ ಬಂದಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಇನ್ಫೋಸಿಸ್ ಫೌಂಡೇಶನ್ ನಿಂದ ಕರೆ ಮಾಡಿದ ಸುಧಾಮೂರ್ತಿಯವರು, ದೇಶ-ವಿದೇಶಗಳಲ್ಲಿ ಆತಂಕ ತಂದಿರುವ ಕರೋನಾವೈರಸ್ ವ್ಯಾಪಕವಾಗಿ ಹರಡದಂತೆ ಕರ್ನಾಟಕದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದ್ದಾರೆ.
ಕರ್ನಾಟಕದಲ್ಲಿ ಒಂದು ಆಸ್ಪತ್ರೆಯನ್ನು ತಮಗೆ ವಹಿಸಿದರೆ, ಅದನ್ನು ಕೊರೋನಾವೈರಸ್ ಚಿಕಿತ್ಸೆಗಾಗಿ ಇನ್ಫೋಸಿಸ್ ಫೌಂಡೇಶನ್ ನಿಂದ ಸಂಸ್ಥೆಯ ವೆಚ್ಚದಲ್ಲಿ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳಿಸುವುದಾಗಿ, ಅಗತ್ಯ ಉಪಕರಣಗಳನ್ನು ಒದಗಿಸುವುದಾಗಿ ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳಿಗೂ ಈ ಬಗ್ಗೆ ಪತ್ರ ಬರೆದಿದ್ದು, ಸದ್ಯದಲ್ಲಿಯೇ ಈ ಕುರಿತಾಗಿ ಉನ್ನತಮಟ್ಟದ ಸಭೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದಿದ್ದಾರೆ.
You must be logged in to post a comment.