
ಮೈಸೂರು: ಸೆಪ್ಟೆಂಬರ್ 29 ರಿಂದ ಆರಂಭವಾಗಲಿರುವ ನಾಡಹಬ್ಬ ಮೈಸೂರು ದಸರಾ ಉತ್ಸವ ಕಾರ್ಯಕ್ರಮಗಳ ವೆಚ್ಚಗಳಿಗಾಗಿ ರಾಜ್ಯ ಸರ್ಕಾರ 18.50 ಕೋಟಿ ರೂಪಾಯಿ ಹಣ ಬಿಡುಗಡೆಗೊಳಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಬುಧವಾರ ಹಣ ಬಿಡುಗಡೆ ಸಂಬಂಧ ಸರ್ಕಾರಿ ಆದೇಶ ಹೊರಡಿಸಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀರಂಗಪಟ್ಟಣ ಹಾಗೂ ಚಾಮರಾಜ ನಗರ ಜಿಲ್ಲೆಗಳಲ್ಲಿ ನಡೆಯುವ ದಸರಾ ಸಂಬಂಧಿತ ವೆಚ್ಚಗಳೂ ಇದರಲ್ಲಿ ಸೇರಿವೆ ಎಂದು ಅವರು ವಿವರಿಸಿದ್ದಾರೆ.
You must be logged in to post a comment.