
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ದಸರಾ ಗಜಪಯಣಕ್ಕೆ ಚಾಲನೆ ನಿಡಲಾಗಿದೆ.
ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ವೀರನಹೊಸಹಳ್ಳಿ ಗ್ರಾಮದಲ್ಲಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಅರ್ಜುನ ನೇತೃತ್ವದ ಗಜಪಡೆಗೆ ಸಚಿವ ಆರ್.ಅಶೋಕ್ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.
ಗಜಪಯಣದ ಮೊದಲ ತಂಡದಲ್ಲಿ ಕ್ಯಾಪ್ಟನ್ ಅರ್ಜುನ, ಅಭಿಮನ್ಯು, ವರಲಕ್ಷ್ಮಿ, ಧನಂಜಯ, ಈಶ್ವರ್ ಹಾಗೂ ವಿಜಯ ಆನೆಗಳು ಲಾರಿ ಮೂಲಕ ಮೈಸೂರಿನ ಅಶೋಕಪುರಂನ ಅರಣ್ಯ ಭವನಕ್ಕೆ ತೆರಳಿವೆ. ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ನಾಲ್ಕು ದಿನ ಆನೆಗಳು ಇರಲಿದ್ದು ಆ.26ರಂದು ಮೈಸೂರು ಅರಮನೆಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗುತ್ತದೆ..
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಚಿವ ಸೋಮಣ್ಣ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮೇಯರ್ ಪುಷ್ಪಲತಾ ಜಗನ್ನಾಥ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಈ ಬಾರಿ 14 ಆನೆಗಳು:
ಈ ಬಾರಿ ಜಂಬೂ ಸವಾರಿ ಯಲ್ಲಿ 14 ಆನೆಗಳು ಪಾಲ್ಗೊಳ್ಳಲಿವೆ. ನಾಗರಹೊಳೆ ಹುಲಿ ಯೋಜನೆ ವಿಭಾಗದ ಬಳ್ಳೆ ಆನೆ ಶಿಬಿರದ 59 ವರ್ಷದ ಅರ್ಜುನ, ಮತ್ತಿಗೋಡು ಆನೆ ಶಿಬಿರದ 61 ವರ್ಷದ ಬಲರಾಮ, 53 ವರ್ಷದ ಅಭಿಮನ್ಯು, 63 ವರ್ಷದ ವರಲಕ್ಷ್ಮಿ, ಮಡಿಕೇರಿ ವಿಭಾಗದ ದುಬಾರೆ ಆನೆ ಶಿಬಿರದ 41 ವರ್ಷದ ಕಾವೇರಿ, 62 ವರ್ಷದ ವಿಜಯ, 46 ವರ್ಷದ ವಿಕ್ರಮ, 37 ವರ್ಷದ ಗೋಪಿ, 36 ವರ್ಷದ ಧನಂಜಯ, 49 ವರ್ಷದ ಈಶ್ವರ, ಬಿ.ಆರ್.ಟಿ ವಿಭಾಗದ ಕೆ.ಗುಡಿ ಆನೆ ಶಿಬಿರದ 52 ವರ್ಷದ ದುರ್ಗಪರಮೇಶ್ವರಿ, ಬಂಡೀಪುರ ವಿಭಾಗ ರಾಮ್‍ಪುರ ಆನೆ ಶಿಬಿರದ 57 ವರ್ಷದ ಜಯಪ್ರಕಾಶ್ ಪಾಲ್ಗೊಳಲಿದೆ.
ಹೆಚ್ಚುವರಿಯಾಗಿ ಬಂಡೀಪುರ ವಿಭಾಗದ ರಾಮ್ ಪುರ ಆನೆ ಶಿಬಿರದ 17 ವರ್ಷದ ಲಕ್ಷ್ಮಿ ಹಾಗೂ 19 ವರ್ಷದ ರೋಹಿತ್ ಒಟ್ಟು 14 ಆನೆಗಳು ಪಾಲ್ಗೊಳ್ಳಲಿವೆ.
ಇಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಅರ್ಜುನ, ಅಭಿಮನ್ಯು, ವರಲಕ್ಷ್ಮಿ, ಧನಂಜಯ, ಈಶ್ವರ್ ಹಾಗೂ ವಿಜಯ ಹೆಸರಿನ ಆರು ಆನೆಗಳು ಮೈಸೂರಿನತ್ತ ತೆರಳಿವೆ.
ಸೆಪ್ಟಂಬರ್ ಮೊದಲ ವಾರದಲ್ಲಿ 2ನೇ ತಂಡ ಆಗಮಿಸಲಿವೆ.
You must be logged in to post a comment.