
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಭಾಗವಾಗಿ ನಡೆಯುವ ಯುವ ದಸರಾ ಮಹೋತ್ಸವಕ್ಕೆ ಬ್ಯಾಡ್ಮಿಂಟನ್ ತಾರೆ ವಿಶ್ವಚಾಂಪಿಯನ್ ಪಿ.ವಿ. ಸಿಂಧು ಚಾಲನೆ ನೀಡಲಿದ್ದಾರೆ. ಇದರ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಕಾರ್ಯಕ್ರಮ ಉದ್ಘಾಟಿಸಲು ಆಗಮಿಸುವಂತೆ ಸಿಂಧು ಅವರನ್ನು ಅಧಿಕೃತವಾಗಿ ಆಹ್ವಾನಿಸಿದರು.

ಅಕ್ಟೋಬರ್ 1ರಂದು ಯುವ ದಸರಾ ಪ್ರಾರಂಭಗೊಳ್ಳಲಿದೆ. ಇದನ್ನು ಉದ್ಘಾಟಿಸಲು ಬರುವಂತೆ ಕೋರಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾಲ್ಕು ದಿನಗಳ ಹಿಂದೆ ಪತ್ರ ಬರೆದಿದ್ದರು. ಇದೀಗ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಷ್ಯಂತ್ ಒಟ್ಟಾಗಿ ಸಿಂಧು ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಆಹ್ವಾನಿಸಿದ್ದಾರೆ.
ಇತ್ತೀಚೆಗೆ ನಡೆದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಲ್ಲಿ ಪಿ.ವಿ. ಸಿಂಧು ಚಿನ್ನದ ಪದಕದ ಸಾಧನೆ ಮಾಡಿದ್ದರು.
You must be logged in to post a comment.