ಜಯದೇವ ಹೃದ್ರೋಗ ಸಂಸ್ಥೆಯ ಮುಖ್ಯಸ್ಥ ಡಾ. ಸಿ.ಎನ್ ಮಂಜುನಾಥ್’ರಿಂದ ದಸರಾ ಉದ್ಘಾಟನೆ

ಮೈಸೂರು: ಜಯದೇವ ಹೃದ್ರೋಗ ಸಂಸ್ಥೆಯ ಮುಖ್ಯಸ್ಥ ಹಾಗೂ ಖ್ಯಾತ ಹೃದಯ ತಜ್ಞ ಡಾ. ಸಿ.ಎನ್ ಮಂಜುನಾಥ್ ವಿಶ್ವವಿಖ್ಯಾತ ಮೈಸೂರು ದಸರಾ 2020ರ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ.

ಪ್ರಸಕ್ತ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ಮಂಜುನಾಥ್ ಅವರನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ತಿಳಿಸಿದರು.

6 ಮಂದಿ ಕೊರೋನಾ ವಾರಿಯರ್ಸ್ ಗಳಿಗೆ ಸನ್ಮಾನ

ದಸರಾ ಉದ್ಘಾಟನಾ ಸಮಾರಂಭದಲ್ಲಿ ಈ 6 ಮಂದಿ ಕೊರೋನಾ ವಾರಿಯರ್ಸ್ ಗಳನ ಸನ್ಮಾನಿಸಲಾಗುವುದು ಎಂದು ಸಚಿವರು ತಿಳಿಸಿದರು.

  1. ಮೈಸೂರಿನ ಪೌರ ಕಾರ್ಮಿಕರಾದ ಮರಗಮ್ಮ,
  2. ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್,
  3. ಸ್ಟಾಫ್ ನರ್ಸ್ ರುಕ್ಮಿಣಿ,
  4. ಆಶಾ ಕಾರ್ಯಕರ್ತೆಯಾದ ನೂರ್ ಜಾನ್,
  5. ಪೊಲೀಸ್ ಕಾನ್ಸ್ ಟೇಬಲ್ ಕುಮಾರ್ ಪಿ.,
  6. ಸಾಮಾಜಿಕ ಕಾರ್ಯಕರ್ತರಾದ ಆಯೂಬ್ ಅಹಮದ್

ತಜ್ಞರ ವರದಿಯಂತೆ ದಸರಾ ಆಚರಣೆ:

ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆಯನ್ನು ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಿದ್ದೇನೆ. ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ 300 ಜನ ಸೇರಿದಂತೆ ಯಾವೆಲ್ಲ ನಿಯಮಗಳನ್ನು ವಿಧಿಸಲಾಗಿದೆಯೋ ಅದರಂತೆಯೇ ಕಾರ್ಯಕ್ರಮವನ್ನು ರೂಪಿಸುತ್ತೇವೆ. ಈ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

Scroll to Top