ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಗಿದೆ.
ಬೆಂಗಳೂರಿನ ಸಿಎಂ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಫಲ ತಾಂಬೂಲ ನೀಡಿ ಆಹ್ವಾನಿಸಿದರು.
ಅ.17ರಂದು ಮೈಸೂರು ದಸರಾ ಮಹೋತ್ಸವ 2020ಕ್ಕೆ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ದೊರಕಲಿದೆ. ಜಯದೇವ ಆಸ್ಪತ್ರೆ ಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಉದ್ಘಾಟನೆ ನೆರವೇರಿಸಲಿದ್ದಾರೆ.