
ಮೈಸೂರು: ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 2 ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರಿನಲ್ಲಿ ಜನವರಿ 13, 14 ರಂದು ತುಂತುರು ಮಳೆ ಸುರಿಯುವ ಸಾಧ್ಯತೆ ಇದೆ. ಎರಡು ದಿನಗಳ ಕಾಲ 2.5 ಮಿ.ಮೀ. ನಿಂದ 15.5 ಮಿ.ಮೀ.ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಲ್ಲದೆ ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಹೇಳಿದೆ.
You must be logged in to post a comment.