ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಮುಂಜಾಗ್ರತೆ ಕ್ರಮವಾಗಿ ಅಂಬಾವಿಲಾಸ ಅರಮನೆ ಸುತ್ತ 200 ಮೀಟರ್ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಕೊರೋನಾ ಹಿನ್ನಲೆ ಈ ಬಾರಿಯ ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತವಾಗಿದೆ. ಮೆರವಣಿಗೆ ವೀಕ್ಷಣೆ ಮಾಡಲು ಕೇವಲ 300 ಮಂದಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಜಂಬೂ ಸವಾರಿ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಇಲ್ಲ. ಹೀಗಾಗಿ ಅರಮನೆ ಸುತ್ತ 200 ಮೀಟರ್ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇನ್ನು ಅವರಮನೆ ಆವರಣ ಸೇರಿದಂತೆ ಅರಮನೆಯ ಸುತ್ತ ಬಿಗಿ ಭದ್ರತೆ ವಹಿಸಲಾಗಿದೆ.