ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ: ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾಗಿದ್ದು ಎಷ್ಟು ಕೋಟಿ ಗೊತ್ತಾ..?

ಚಾಮರಾಜನಗರ: ರಾಜ್ಯದ ಅತೀ ಹೆಚ್ಚು ಆದಾಯ ತರುವ ದೇವಸ್ಥಾನಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕೊಳ್ಳೇಗಾಲ ತಾಲೂಕಿನ ಸುಪ್ರಸಿದ್ಧ ಧಾರ್ಮಿಕಕ್ಷೇತ್ರ ಸ್ಥಳ ಮಲೆ ಮಹದೇಶ್ವರ ಬೆಟ್ಟ ದ ಹುಂಡಿಯಲ್ಲಿ 2,13 ಕೋಟಿ ರೂ. ದಾಖಲೆಯ ಮೊತ್ತ ಸಂಗ್ರಹವಾಗಿದೆ.

ಹುಂಡಿಯಲ್ಲಿ ಒಟ್ಟು 2 ಕೋಟಿ, 13 ಲಕ್ಷದ 93 ಸಾವಿರ ರೂ. ಹಾಗೂ 55 ಗ್ರಾಂ ಚಿನ್ನ ಹಾಗೂ 1 ಕೆ.ಜಿ 800 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಮಾರ್ಚ್ 9ರಿಂದ 28ರ ವರೆಗೆ ಸಂಗ್ರಹವಾದ ಹಣ ಇದಾಗಿದ್ದು, ಈ ಮಾಹೆ ಮಹಾ ಶಿವರಾತ್ರಿ ಜಾತ್ರೆ ನಡೆದಿದ್ದರಿಂದ ಕ್ಷೇತ್ರಕ್ಕೆ ಭಕ್ತರ ಸಂಖ್ಯೆ ಹೆಚ್ಚಳವಾಗಿತ್ತು.

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಮಲೆಮಹದೇಶ್ವರಬೆಟ್ಟದ ಹುಂಡಿಯಲ್ಲಿ ಮೂರೇ ದಿನದಲ್ಲಿ 1.44 ಕೋಟಿ ರೂ. ಹಣ ಸಂಗ್ರವಾಗಿತ್ತು.

ನಿನ್ನೆ ಬೆಳಿಗ್ಗೆಯಿಂದ ಮಧ್ಯರಾತ್ರಿ 1.30ರ ವರೆಗೆ ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಗುರುಸ್ವಾಮಿಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

Leave a Comment

Scroll to Top