ಮೈಸೂರು: ವಿವಿಧ ರೈತ ಸಂಘಟನೆಗಳು ಇದೇ ತಿಂಗಳು 28ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ, ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಸೆಪ್ಟೆಂಬರ್ 28 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ವಿಷಯದ ಪರೀಕ್ಷೆಗಳನ್ನು ನಡೆಸಲು ಈ ಹಿಂದೆ ನಿಗದಿಪಡಿಸಲಾಗಿತ್ತು.
ಆದರೆ ಇದೀಗ ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಕಾರಣದಿಂದಾಗಿ ಪರೀಕ್ಷೆಯನ್ನು ಸೆಪ್ಟೆಂಬರ್ 29ಕ್ಕೆ ನಡೆಸಲು ಪರೀಕ್ಷಾ ಮಂಡಳಿ ನಿರ್ಧರಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ಪರೀಕ್ಷೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.