ಮೈಸೂರಿನಲ್ಲಿ ಮತ್ತೊಂದು ಕೊರೋನಾ ವೈರಸ್ ಪತ್ತೆ

ಮೈಸೂರು: ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಎರಡಕ್ಕೆ ಏರಿದೆ.

ದುಬೈನಿಂದ ಮೈಸೂರಿಗೆ ಬಂದಿದ್ದ 46ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತನಿಗೆ ನಗರದ ಕೆಆರ್ ಆಸ್ಪತ್ರೆಯಯ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೋನಾ ವೈರಸ್​ ಮಟ್ಟ ಹಾಕಲು ರಾಜ್ಯ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದಾಗ್ಯೂ ವೈರಸ್ ಹರಡುವಿಕೆ ನಿಯಂತ್ರಣಕ್ಕೆ ಬರುತ್ತಿಲ್ಲ. ಭಾನುವಾರ ಒಂದೇ ದಿನ 6 ಹೊಸ ಪ್ರಕರಣ ದಾಖಲಾಗಿದ್ದವು. ಸೋಮವಾರ ಕೂಡ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಕರ್ನಾಟಕದಲ್ಲಿ ಹೊಸ ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ಬೆಂಗಳೂರಿನಲ್ಲಿ 17, ಕಲ್ಬುರ್ಗಿ 3, ಕೊಡಗು 1, ಚಿಕ್ಕಬಳ್ಳಾಪುರ 2, ಮೈಸೂರು 2, ಧಾರವಾಡ 1, ಉತ್ತರ ಕನ್ನಡ 1 ಪ್ರಕರಣಗಳು ದಾಖಲಾಗಿವೆ.

Scroll to Top