ಐವರಿಗೆ ಕೊರೋನಾ ಧೃಡಪಟ್ಟ ಹಿನ್ನಲೆ ನಂಜನಗೂಡು ಸಂಪೂರ್ಣ ಲಾಕ್‍ಡೌನ್!

ಮೈಸೂರು: ಮೈಸೂರಿನಲ್ಲಿ ಇಂದು ಐವರಿಗೆ ಕೊರೊನಾ ವೈರಸ್ ಇರುವುದು ಧೃಡಪಟ್ಟಿದೆ. ನಂಜನಗೂಡು ಸೊಂಕಿತನಿಂದ ಇತರೆ 5 ಮಂದಿಗೆ ಸೊಂಕು ಹರಡಿರುವುದು ಕಂಡುಬಂದ ಹಿನ್ನಲೆ ನಂಜನಗೂಡು ನಗರವನ್ನು ಸಂಪೂರ್ಣ ಲಾಕ್‍ಡೌನ್ ಮಾಡಲಾಗಿದೆ.

ನಂಜನಗೂಡಿನ ಸೋಂಕಿತನ ಜೊತೆ ಸಂಪರ್ಕ ಹೊಂದಿದ್ದ ಐವರಲ್ಲಿ ಕೊರೊನಾ ಕಂಡು ಬಂದಿದೆ. ಮೊದಲಿಗೆ ನಂಜನಗೂಡಿನ ಜುಬಿಲೆಟ್ಸ್ ಕಾರ್ಖಾನೆಯ ಉದ್ಯೋಗಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಒಂದೇ ಕಾರ್ಖಾನೆಯ ಐವರಲ್ಲಿ ಕೊರೊನಾ ಸೋಂಕು ದೃಢಪಟ್ಟಿರೋದು ಆತಂಕಕ್ಕೆ ಕಾರಣವಾಗಿದೆ.

ಇನ್ನು ಕಾರ್ಖಾನೆಯ ಸಿಬ್ಬಂದಿಯ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ ನಂಜನಗೂಡು ನಗರವನ್ನು ಸಂಪೂರ್ಣವಾಗಿ ಲಾಕ್‍ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ನಂಜನಗೂಡಿಗೆ ಒಳ ಮತ್ತು ಹೊರ ಹೋಗುವ ಎಲ್ಲ ವಾಹನಗಳ ಮೇಲೆ ನಿರ್ಬಂಧ ಹಾಕಲಾಗುತ್ತಿದೆ. ನಂಜನಗೂಡಿಗೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಮೈಸೂರಿನಲ್ಲಿ ಒಟ್ಟು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 8ಕ್ಕೇರಿದೆ.

Scroll to Top