ಮೈಸೂರಿನಲ್ಲಿ ಮತ್ತೆ ಐವರಿಗೆ ಕೊರೋನಾ ಪಾಸಿಟಿವ್..! ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪೀಡಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ 5 ಕೊರೊನಾ ಪಾಸಿಟಿವ್ ಪ್ರಕರಣ ಧೃಡಪಟ್ಟಿದೆ.

ನಂಜನಗೂಡು ಸೊಂಕಿತನಿಂದ ಇತರೆ 5 ಮಂದಿಗೆ ಸೊಂಕು ಹರಡಿದೆ. ಈ ಮೂಲಕ ಮೈಸೂರಿನಲ್ಲಿ ಒಟ್ಟು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 8ಕ್ಕೇರಿದೆ.

ಹೊಸ 5 ಮಂದಿ ನಂಜನಗೂಡಿನ ಜುಬಿಲೆಟ್ಸ್ ಕಾರ್ಖಾನೆ ಕಾರ್ಮಿಕರು ಎಂದು ತಿಳಿದುಬಂದಿದ್ದು ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ‌ ದೊರೆತಿದೆ..

Scroll to Top