
ಬೆಂಗಳೂರು: ಕೇಂದ್ರ ಸರ್ಕಾರದ “ಕಾರ್ಮಿಕ-ವಿರೋಧಿ” ನೀತಿ ವಿರುದ್ಧ ಪ್ರತಿಭಟಿಸುತ್ತಿರುವ ಕಾರ್ಮಿಕ ಸಂಘಗಳು ಮಂಗಳವಾರ ಮತ್ತು ಬುಧವಾರ ಭಾರತ್ ಬಂದ್ ಗೆ ಕರೆ ನೀಡಿದ್ದು ಎರಡು ದಿನ ನಿಶಬ್ದವಾಗಲಿದೇ ಕರುನಾಡು.
ಮೋಟಾರ್ ವಾಹನ ತಿದ್ದುಪಡಿ(ಮಸೂದೆ-2017) ಮಸೂದೆ ಸೇರಿದಂತೆ 12 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ, ನಾಳಿದ್ದು ಬಂದ್ಗೆ ಕರೆ ನೀಡಿವೆ.
ಕನಿಷ್ಠ ವೇತನ, ಗುತ್ತಿಗೆ ಪದ್ಧತಿ ನಿಷೇಧ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AITUC, CITU ಸೇರಿದಂತೆ ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಇನ್ನು ರಾಜ್ಯದಲ್ಲಿನ ನಾಲ್ಕು ಸಾರಿಗೆ ನಿಗಮದ ನೌಕರರು ಕೂಡಾ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.
ಎರಡು ದಿನಗಳ ಕಾಲ ಬಸ್ಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಸಾರಿಗೆ ನಿಗಮದ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಅಷ್ಟೇ ಅಲ್ಲದೇ ಬಂದ್ಗೆ ಆಟೋ ಚಾಲಕರ ಸಂಘ ಹಾಗೂ ಬ್ಯಾಂಕ್ ನೌಕರರ ಸಂಘ ಕೂಡಾ ಬೆಂಬಲ ಸೂಚಿಸಿವೆ. ಬಂದ್ಗೆ ಬ್ಯಾಂಕ್ ನೌಕರರ ಸಂಘ ಸಂಪೂರ್ಣ ಬೆಂಬಲ ನೀಡಲಿದೆ. ಓಲಾ ಊಬರ್ ನೌಕರರ ಸಂಘಟನೆಗಳಿಂದ ಬಂದ್ಗೆ ನೈತಿಕ ಬೆಂಬಲ ವ್ಯಕ್ತವಾಗಿದೆ.
ಆಸ್ಪತ್ರೆ, ಆ್ಯಂಬುಲೆನ್ಸ್, ಮೆಡಿಕಲ್ಸ್ ಸೇರಿದಂತೆ ದಿನ ನಿತ್ಯದ ಅಗತ್ಯ ವಸ್ತುಗಳು ಎಂದಿನಂತೆ ಇರಲಿವೆ.
ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾಕಾಲೇಜುಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಕಚೇರಿಗಳಿಗೆ ಈವರೆಗೂ ಅಧಿಕೃತವಾಗಿ ರಜೆ ಘೋಷಣೆ ಮಾಡಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಸಂಸ್ಥೆಯ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.
ಇನ್ನು ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್ ಗೆ ಸಹಕಾರ ನೀಡುವುದಾಗಿ ಸಾರಿಗೆ ಸಚಿವ ಡಿಸಿ.ತಮ್ಮಣ್ಣ ಹೇಳಿದ್ದಾರೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ ಮಾತ್ರ ಬಸ್ ಸಂಚಾರ ಇರುತ್ತೆ. ಇಲ್ಲದಿದ್ರೆ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದ್ದಾರೆ.