
ಮೈಸೂರು: ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಚಾಮರಾಜನಗರ, ಮೈಸೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಕೇಂದ್ರ ರೈಲ್ವೆ ಕಂಟ್ರೋಲ್ ರೂಂಗೆ ತಡರಾತ್ರಿ ಸುಮಾರು 1.30ಕ್ಕೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿದ್ದಾನೆ. ಹೀಗಾಗಿ ತಪಾಸಣೆ ನಡೆಸಿರುವ ಪೊಲೀಸರು ಕರೆ ಮಾಡಿದ ನಂಬರ್ ಸಂಗ್ರಹಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗುರುವಾರ ತಡರಾತ್ರಿ 2 ಗಂಟೆಗೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ (ಎಡಿಜಿಪಿ) ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಒಡ್ಡಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಚಾಮರಾಜನಗರ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಲ್ಲಿಯೂ ಪರಿಶೀಲನೆ ನಡೆಸಿದ್ದಾರೆ.
You must be logged in to post a comment.