ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಸಮಯ ನಿಗದಿ: ಈ ದಿನಗಳಲ್ಲಿ ಬೆಟ್ಟಕ್ಕೆ ನೋ ಎಂಟ್ರಿ

ಮೈಸೂರು: ನಾಡದೇವಿ ‘ಚಾಮುಂಡಿ’ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದ್ದು ಈ ದಿನಗಳಲ್ಲಿ ದರ್ಶನ ಭಾಗ್ಯ ಇರುವುದಿಲ್ಲ.

ನಗರದ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದರ್ಶನಕ್ಕೆ‌ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಸಮಯ ನಿಗದಿ ಪಡಿಸಿದ್ದು, ಬೆಳಿಗ್ಗೆ 7.30ರಿಂದ ಮಧ್ಯಾಹ್ನ 1 ಗಂಟೆ, ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಭಕ್ತರು ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿದೆ.

ಇನ್ನು ಶನಿವಾರ ಭಾನುವಾರ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ದೇವಾಲಯಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಚಾಮುಂಡಿಬೆಟ್ಟಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

Scroll to Top